Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ಅಲಿಗಢ: ಉತ್ತರ ಪ್ರದೇಶದ ಅಲಿಗಢ ಬಳಿಯ ರಾಷ್ಟ್ರೀಯ ಹೆದ್ದಾರಿ 91 ರಲ್ಲಿ ಮಂಗಳವಾರ ಬೆಳಿಗ್ಗೆ ಕಾರು ಮಿನಿ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಸಜೀವ ದಹನವಾಗಿದ್ದಾರೆ.
ಗಂಭೀರ ಗಾಯಗಳೊಂದಿಗೆ ಒಬ್ಬ ವ್ಯಕ್ತಿ ಬದುಕುಳಿದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ,ದೇವಾಲಯಕ್ಕೆ ಹೋಗಿ ಹಿಂತಿರುಗುತ್ತಿದ್ದ ವೇಳೆ ಈ ಘಟನೆ ನಡೆದಿದೆ
ಎರಡೂ ವಾಹನಗಳು ಅತಿ ವೇಗದಲ್ಲಿ ಚಲಿಸುತ್ತಿದ್ದಾಗ ಮುಖಾಮುಖಿ ಡಿಕ್ಕಿ ಹೊಡೆದು ಒಟ್ಟಿಗೆ ಸಿಲುಕಿಕೊಂಡವು. ಪರಿಣಾಮ ಇಂಧನ ಟ್ಯಾಂಕ್ ಛಿದ್ರಗೊಂಡು, ಬೆಂಕಿ ಕಾಣಿಸಿಕೊಂಡು ಎರಡೂ ವಾಹನಗಳು ಕ್ಷಣಾರ್ಧದಲ್ಲಿ ಸುಟ್ಟು ಭಸ್ಮವಾದವು. ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡವು.