Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಏಳು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮಂಗಳವಾರ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ರಾಯಚೂರು, ಕೊಪ್ಪಳ, ಬಾಗಲಕೋಟೆ, ವಿಜಯಪುರ, ಯಾದಗಿರಿ, ಕಲಬುರಗಿ ಮತ್ತು ಬೀದರ್ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಮುಂದಿನ ವಾರ ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಸೆಪ್ಟೆಂಬರ್ 27 ರಿಂದ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.