Subscribe NewsicsKannada/ YouTube
newsics.com
ಬೆಂಗಳೂರು: ಕನ್ನಡದ ಖ್ಯಾತ ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪ (94) ಬುಧವಾರ ಮಧ್ಯಾಹ್ನ ವಿಧಿವಶರಾಗಿದ್ದು, ಗುರುವಾರ ಬೆಳಗ್ಗೆ 8 ಗಂಟೆಯಿಂದ 2 ಗಂಟೆಯವರೆಗೆ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ಮಾಡಲಾಗಿದೆ.
ಗುರುವಾರ ಬೆಳಗ್ಗೆ 8 ಗಂಟೆಗೆ ರವೀಂದ್ರ ಕಲಾಕ್ಷೇತ್ರಕ್ಕೆ ಆಸ್ಪತ್ರೆಯಿಂದ ಪಾರ್ಥಿವ ಶರೀರವನ್ನು ತೆಗೆದುಕೊಂಡು ಹೋಗಿ ಅಂತಿಮ ದರ್ಶನಕ್ಕೆ ಇಡಲಾಗುತ್ತದೆ. ಮಧ್ಯಾಹ್ನ 1 ಘಂಟೆಯ ನಂತರ ಪಾರ್ಥಿವ ಶರೀರವನ್ನು ಮೈಸೂರಿಗೆ ತೆಗೆದುಕೊಂಡು ಹೋಗಲಾಗುತ್ತದೆ. ಮಧ್ಯಾಹ್ನ 3 ಗಂಟೆಗೆ ಮೈಸೂರಿನ ಕಲಾಮಂದಿರಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ.
ಶುಕ್ರವಾರ ಬೆಳಗ್ಗೆ ಸಕಾಲ ಸರ್ಕಾರಿ ಗೌರವದೊಂದಿಗೆ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಸಿಎಂ ಸಿದ್ದರಾಮಯ್ಯನವವರು ಮೈಸೂರು ಜಿಲ್ಲಾಡಳಿತಕ್ಕೆ ಈ ಬಗ್ಗೆ ಸೂಚನೆ ನೀಡಿದ್ದಾರೆ.
ತಮ್ಮ ಸಾಹಿತ್ಯ ಸೇವೆಗಾಗಿ ಅನೇಕ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಅವರ ಪ್ರಮುಖ ಕಾದಂಬರಿಗಳಾದ ವಂಶವೃಕ್ಷ, ದಾಟು, ತಂತು ಮುಂತಾದವು ಕನ್ನಡ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿವೆ. ಭೈರಪ್ಪನವರು ಕಾದಂಬರಿಗಳ ಜೊತೆಗೆ ಸೌಂದರ್ಯ ಮೀಮಾಂಸೆಯ ಕುರಿತು ಹಲವು ಗ್ರಂಥಗಳನ್ನು ರಚಿಸಿದ್ದಾರೆ.