Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > SSLC ವಿದ್ಯಾರ್ಥಿಗಳಿಗೆ ಶಾಕ್: ಪರೀಕ್ಷಾ ಶುಲ್ಕ ಹೆಚ್ಚಿಸಿದ ರಾಜ್ಯ ಸರ್ಕಾರ
ಕರ್ನಾಟಕದೇಶಪ್ರಮುಖ

SSLC ವಿದ್ಯಾರ್ಥಿಗಳಿಗೆ ಶಾಕ್: ಪರೀಕ್ಷಾ ಶುಲ್ಕ ಹೆಚ್ಚಿಸಿದ ರಾಜ್ಯ ಸರ್ಕಾರ

Share
1 Min Read
SHARE

Subscribe NewsicsKannada/YouTube

newsics.com

ರಾಜ್ಯದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಸರ್ಕಾರ ಪರೀಕ್ಷಾ ಶುಲ್ಕ ಹೆಚ್ಚಳದ ಶಾಕ್ ನೀಡಿದೆ.

2025-26ನೇ ಸಾಲಿನಲ್ಲಿ ನಡೆಯುವ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕವನ್ನು ಪರಿಷ್ಕರಣೆ ಮಾಡಿ ಇಲಾಖೆ ಆದೇಶಿಸಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಆದೇಶ ಹೊರಡಿಸಿದ್ದು, ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಲಿಯಿಂದ ನಡೆಸಲಾಗುವ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಸಂಬಂಧಪಟ್ಟಂತೆ ನೋಂದಣಿಯಾಗುವ ವಿದ್ಯಾರ್ಥಿಗಳಿಂದ ಉಲ್ಲೇಖಿತ-1ರ ಸರ್ಕಾರದ ಆದೇಶದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷಾ ಶುಲ್ಕವನ್ನು ಶೇಕಡಾ 5 ರಷ್ಟು ಪ್ರತಿ ವರ್ಷ ಹೆಚ್ಚಿಸಿ ಪರಿಷ್ಕರಿಸಲು ಆದೇಶಿಸಲಾಗಿದೆ.

2025- 26ನೇ ಸಾಲಿಗೆ ಪರೀಕ್ಷಾ ನೋಂದಣಿಗೆ ಅರ್ಜಿಗಳನ್ನು ಆಹ್ವಾನಿಸುವ ಹಿನ್ನೆಲೆ 2025-26ರ ಸಾಲಿನಲ್ಲಿ ನಡೆಯಲಿರುವ ಪರೀಕ್ಷೆಗಳಿಗೆ ಪ್ರಸ್ತುತ ಇರುವ ದರಕ್ಕೆ ಶೇಕಡಾ 5 ರಷ್ಟು ಸೇರಿಸಿ ಪರೀಕ್ಷಾ ಶುಲ್ಕವನ್ನು ಪರಿಷ್ಕರಿಸಿದೆ.

ಎಸ್ಎಸ್ಎಲ್‌ಸಿ ಪರೀಕ್ಷಾ ಶುಲ್ಕದ ಹೆಚ್ಚಳ ವಿವರ

ಎಸ್ ಎಸ್ ಎಲ್ ಸಿ ಪರೀಕ್ಷಾ ಶುಲ್ಕ ( CCERF & CCEPF) ವಿದ್ಯಾರ್ಥಿಗಳು- ರೂ.676 ಇದ್ದ ಶುಲ್ಕವನ್ನು ರೂ.710ಕ್ಕೆ ಏರಿಕೆ ಮಾಡಲಾಗಿದೆ.

ಹೊಸದಾಗಿ ನೋಂದಣಿಯಾಗುವ ಖಾಸಗಿ ಅಭ್ಯರ್ಥಿಗಳ ನೋಂದಣಿ ಶುಲ್ಕ ಹಾಗೂ ಅರ್ಜಿ ಶುಲ್ಕವನ್ನು ರೂ.236ರಿಂದ ರೂ.248ಕ್ಕೆ ಹೆಚ್ಚಳ ಮಾಡಲಾಗಿದೆ.

ಈಗಾಗಲೇ ಖಾಸಗಿ ಅಭ್ಯರ್ಥಿಯಾಗಿ ನೋಂದಣಿಯಾಗಿ ಪರೀಕ್ಷಾ ಶುಲ್ಕ ಪಾವತಿಸಿದ ಅಭ್ಯರ್ಥಿಗಳ ನೋಂದಣಿ ನವೀಕರಣ ಶುಲ್ಕವನ್ನು ರೂ.69 ಇದ್ದದ್ದು ರೂ.72ಕ್ಕೆ ಹೆಚ್ಚಿಸಲಾಗಿದೆ.

ಪುನರಾವರ್ತಿ ಶಾಲಾ, ಖಾಸಗಿ ಅಭ್ಯರ್ಥಿಗಳ ಪರೀಕ್ಷಾ ಶುಲ್ಕ ಒಂದು ವಿಷಯಕ್ಕೆ ರೂ.427 ಇದ್ದದ್ದು ರೂ.448ಕ್ಕೆ ಏರಿಸಲಾಗಿದೆ.

ಎರಡು ವಿಷಯಕ್ಕೆ ರೂ.532 ಇದ್ದದ್ದನ್ನು ರೂ.559ಕ್ಕೆ ಹೆಚ್ಚಳ ಮಾಡಲಾಗಿದೆ.

ಮೂರು ಮತ್ತು ಮೂರಕ್ಕಿಂತ ಹೆಚ್ಚಿನ ವಿಷಯಗಳಿಗೆ ರೂ.716 ಇದ್ದ ಶುಲ್ಕವನ್ನು ರೂ.752ಕ್ಕೆ ಹೆಚ್ಚಿಸಲಾಗಿದೆ.

TAGGED:Shock for SSLC students: State government increases exam fees
Share This Article
Facebook Twitter Copy Link Print
Previous Article Reels has adverse effects on the brain ಅತಿಯಾಗಿ ರೀಲ್ಸ್ ನೋಡುವುದರಿಂದ ಮೆದುಳಿನ ಮೇಲೆ ದುಷ್ಪರಿಣಾಮ: ಸಂಶೋಧನಾ ವರದಿ ಬಹಿರಂಗ
Next Article UGC bans online yoga ಆನ್‌ಲೈನ್ ಯೋಗ,‌ ಪ್ರವಾಸೋದ್ಯಮ ಶಿಕ್ಷಣ ನಿಷೇಧಿಸಿದ ಯುಜಿಸಿ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?