Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ಬೆಂಗಳೂರು : ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪನವರ ಸ್ಮಾರಕ ನಿರ್ಮಿಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಎಸ್.ಎಲ್ ಭೈರಪ್ಪನವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ
ತಮ್ಮ ಸಾಹಿತ್ಯ ಸೇವೆಗಾಗಿ ಅನೇಕ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಅವರ ಪ್ರಮುಖ ಕಾದಂಬರಿಗಳಾದ ವಂಶವೃಕ್ಷ, ದಾಟು, ತಂತು ಮುಂತಾದವು ಕನ್ನಡ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿವೆ. ಭೈರಪ್ಪನವರು ಕಾದಂಬರಿಗಳ ಜೊತೆಗೆ ಸೌಂದರ್ಯ ಮೀಮಾಂಸೆಯ ಕುರಿತು ಹಲವು ಗ್ರಂಥಗಳನ್ನು ರಚಿಸಿದ್ದಾರೆ. ಅವರು 1999 ರಲ್ಲಿ ಕನಕಪುರದಲ್ಲಿ ನಡೆದ 67ನೇ ಅಖಿಲ ಕರ್ನಾಟಕ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಪ್ರತಿಷ್ಠಿತ ಪದ್ಮಶ್ರೀ, ಪದ್ಮಭೂಷಣ, ಸರಸ್ವತಿ ಸಮ್ಮಾನ್ ಪ್ರಶಸ್ತಿಗಳು ಇವರಿಗೆ ಸಂದಿವೆ.