Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ಚೆನ್ನೈ: ತಮಿಳುನಾಡಿನಲ್ಲಿ ನಟ ವಿಜಯ್ ರ್ಯಾಲಿಯಲ್ಲಿ ಭಾರಿ ಕಾಲ್ತುಳಿತ ಉಂಟಾಗಿದೆ. ತಮಿಳಿಗ ವೆಟ್ರಿ ಕಳಗಂ ಪಕ್ಷದ ಮುಖ್ಯಸ್ಥ ಹಾಗೂ ನಟ ವಿಜಯ್ ಅವರು ಕರೂರಿನಲ್ಲಿ ಹಮ್ಮಿಕೊಂಡಿದ್ದ ರ್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿ 29 ಮಂದಿ ಸಾವನ್ನಪ್ಪಿದ್ದಾರೆ.
ತಮಿಳುನಾಡಿನ ಕರೂರಿನಲ್ಲಿ ರ್ಯಾಲಿ ನಡೆಯುವಾಗ ಭಾರಿ ಸಂಖ್ಯೆಯಲ್ಲಿ ಜನ ಸೇರಿದ್ದರು. ಈ ವೇಳೆ ನೂಕು ನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ. ಕಾಲ್ತುಳಿತದಲ್ಲಿ 29 ಕ್ಕೂ ಅಧಿಕ ಮಂದಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಭಾರೀ ಏರಿಕೆಯಾಗುವ ಸಾಧ್ಯತೆ ಇದೆ.