Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ಏಷ್ಯಾಕಪ್‌ನಲ್ಲಿ ಭಾರತದ ವಿರುದ್ಧ ಹೀನಾಯವಾಗಿ ಸೋತು, ಮುಖಭಂಗ ಅನುಭವಿಸುತ್ತಿರೋ ಪಾಕ್‌ಗೆ ಅತ್ತ ಪಿಒಕೆಯಲ್ಲಿ ಶಾಕ್ ಎದುರಾಗಿದೆ. ಶೆಹಬಾಜ್ ಷರೀಫ್ ಹಾಗೂ ಪಾಕಿಸ್ತಾನ ಸರ್ಕಾರದ ವಿರುದ್ಧ ಪಿಒಕೆಯಲ್ಲಿ ಬೃಹತ್ ಮಟ್ಟದ ಪ್ರತಿಭಟನೆ ನಡೆದಿದೆ.
ಪ್ರಧಾನಿ ಶೆಹಬಾಜ್ ಷರೀಫ್ ಸರ್ಕಾರದ ವಿರುದ್ಧ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಅನಿರ್ದಿಷ್ಟಾವಧಿಗೆ ಮುಷ್ಕರಕ್ಕೆ ಕರೆ ನೀಡಲಾಗಿದ್ದು ಸಾವಿರಾರು ಜನರು ಬೀದಿಗಿಳಿದಿದ್ದಾರೆ. ಅಂಗಡಿಗಳನ್ನು ಮುಚ್ಚಿ, ರಸ್ತೆಗಳನ್ನು ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಪ್ರದೇಶದಲ್ಲಿ ಉದ್ವಿಗ್ನತೆಯನ್ನು ಹೆಚ್ಚಿಸಿದೆ.
ಈ ಪ್ರದೇಶದಲ್ಲಿ ಇಸ್ಲಾಮಾಬಾದ್ ಅಪಾರ ಪ್ರಮಾಣದಲ್ಲಿ ಭದ್ರತಾ ಪಡೆಗಳನ್ನು ನಿಯೋಜಿಸಿದೆ. ಮಧ್ಯರಾತ್ರಿಯಿಂದ ಇಂಟರ್ನೆಟ್ ಸಂಪರ್ಕವನ್ನು ಕಡಿತಗೊಳಿಸಿದೆ.