ಭಾರತ ಮತ್ತು ಪಾಕಿಸ್ತಾನ್ ನಡುವಣ ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ದುಬೈನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು 19.1 ಓವರ್ಗಳಲ್ಲಿ 146 ರನ್ಗಳಿಸಿ ಆಲೌಟ್ ಆಗಿತ್ತು. ಈ ಗುರಿಯನ್ನು 19.4 ಓವರ್ಗಳಲ್ಲಿ ಚೇಸ್ ಮಾಡಿ ಟೀಮ್ ಇಂಡಿಯಾ 5 ವಿಕೆಟ್ಗಳ ಜಯ ಸಾಧಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.
ಮೊಹ್ಸಿನ್ ನಖ್ವಿ ಅವರಿಂದ ಟ್ರೋಫಿ ಸ್ವೀಕರಿಸಲು ಭಾರತ ನಿರಾಕರಿಸಿದ್ದರಿಂದ ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ ಟ್ರೋಫಿ ಜೊತೆ ಪರಾರಿಯಾಗಿದ್ದು, ಪಾಕ್ ನಗೆಪಾಟಲಿಗೆ ಗುರಿಯಾಗಿದೆ. ಇದರ ನಡುವೆ ಟೀಂ ಇಂಡಿಯಾ ಟ್ರೋಫಿ ಇಲ್ಲದೇ ಮೈದಾನದಲ್ಲಿ ಸಂಭ್ರಮಿಸಿ ಪಾಕ್ ಕ್ರಿಕೆಟಿಗರ ಹೊಟ್ಟೆ ಉರಿಸಿದೆ. ಇದೀಗ ಟೀಂ ಇಂಡಿಯಾ ಆಟಗಾರ ಸೂರ್ಯಕುಮಾರ್ ಯಾದವ್ ಇಮೋಜಿ ಮೂಲಕ ಸಂಭ್ರಮಿಸಿದ್ದಾರೆ.
ತಮ್ಮ ಪೋಸ್ಟ್ನಲ್ಲಿ ನಾಯಕ ಸೂರ್ಯಕುಮಾರ್ ಯಾದವ್, “ಆಟ ಮುಗಿದ ಮೇಲೆ ನೆನಪಿನಲ್ಲಿ ಉಳಿಯುವುದು ಚಾಂಪಿಯನ್ಗಳೇ ಹೊರತು, ಟ್ರೋಫಿಯ ಚಿತ್ರವಲ್ಲ” ಎಂದು ಬರೆಯುವ ಮೂಲಕ, ತಮ್ಮ ತಂಡದ ಸಾಧನೆಯೇ ಅಂತಿಮ ಸತ್ಯ ಎಂಬುದನ್ನು ಸ್ಪಷ್ಟಪಡಿಸಿದರು.