Subscribe NewsicsKannada/ YouTube
newsics.com
ತೀರ್ಥಹಳ್ಳಿ: ಕೊಠಡಿಯಲ್ಲಿ ಪತಿಯೊಂದಿಗೆ ತಂಗಿದ್ದ ಮಹಿಳೆಗೆ ಮಂಚದ ಕೆಳಗೆ ಮಲಗಿದ್ದ ಪರಪುರುಷನೊಬ್ಬ ನಡುರಾತ್ರಿ ಮೈಕೈ ಮುಟ್ಟಿ ಆತಂಕ ಮೂಡಿಸಿದ್ದಾನೆ.
ಈ ಘಟನೆ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರಿನ ದಂಪತಿ ಇತ್ತೀಚೆಗೆ ಪಟ್ಟಣದ ಕುವೆಂಪು ಲೇಔಟ್‌ನ ಮನೆಯಲ್ಲಿ ತಂಗಿದ್ದರು. ಕೊಠಡಿಯಲ್ಲಿ ಮಲಗಿದ್ದಾಗ ರಾತ್ರಿ 12.30ರ ಹೊತ್ತಿಗೆ ಮಂಚದ ಕೆಳಗಿನಿಂದ ವ್ಯಕ್ತಿಯೊಬ್ಬ ಮಹಿಳೆಯ ಮೈಕೈ ಮುಟ್ಟಿದ ಅನುಭವವಾಗಿದೆ. ಮಹಿಳೆ ತನ್ನ ಪತಿಗೆ ವಿಷಯ ತಿಳಿಸಿದ್ದು, ಅವರು ಪರಿಶೀಲಿಸಿದರು. ಆಗ ಮಂಚದ ಅಡಿಯಿಂದ ಎದ್ದು ಬಂದ ವ್ಯಕ್ತಿಯೊಬ್ಬ ಬಾಗಿಲು ತೆಗೆದು ಹೊರಗೆ ಹೋಗಿದ್ದಾನೆ ಎಂದು ಆರೋಪಿಸಿದ್ದಾರೆ.
ಅಪರಿಚಿತ ವ್ಯಕ್ತಿಯು ಮಹಿಳೆಯರು ಧರಿಸುವ ಫ್ರಾಕ್ ಧರಿಸಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಘಟನೆ ಸಂಬಂಧ ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Kodimatha Swamiji ಮಲೆನಾಡು ಬಯಲುಸೀಮೆ ಆಗುತ್ತಾ?;ಕೋಡಿ ಶ್ರೀ ಶಾಕಿಂಗ್ ಭವಿಷ್ಯ
ನಾಡು ಬಂಗಾರದ ಗಿಂಡಿಲೇ.. ನಾಡು ಸಿರಿಯಾಗಿಲತೇ ಪರಾಕ್: ಸುಕ್ಷೇತ್ರ ದೇವರಗುಡ್ಡದ ಕಾರ್ಣಿಕ ನುಡಿ