newsics.com
ಕೇವಲ 15 ದಿನಗಳ ಅಂತರದಲ್ಲಿ 6 ಮಕ್ಕಳು ಕಿಡ್ನಿ ಫೇಲ್ ಆಗಿ ಸಾವನ್ನಪ್ಪಿರುವ ಧಾರುಣ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಮಧ್ಯಪ್ರದೇಶದ ಛಿಂದ್ವಾರ ಜಿಲ್ಲೆಯಲ್ಲಿ ಈ ಬೆಚ್ಚಿಬೀಳಿಸುವ ಹೃದಯ ವಿದ್ರಾವಕ ದುರಂತ ಸಂಭವಿಸಿದ್ದು, ಕಳೆದ 15 ದಿನಗಳಲ್ಲಿ ಆರು ಮಕ್ಕಳು ಮೂತ್ರಪಿಂಡ ವೈಫಲ್ಯದಿಂದ ಸಾವನ್ನಪ್ಪಿದ್ದಾರೆ.
ಋತುಮಾನದ ಜ್ವರದ ಸಾಮಾನ್ಯ ಸಮಸ್ಯೆಗಳಂತೆ ಕಂಡುಬಂದಿದ್ದ ಈ ಘಟನೆ ಈಗ ವಿಚಿತ್ರ ತಿರುವು ಪಡೆದುಕೊಂಡಿದೆ. ಮಕ್ಕಳಿಗೆ ನೀಡಿದ ಕೆಮ್ಮಿನ ಸಿರಪ್ ನ ಅಡ್ಡಪರಿಣಾಮದಿಂದಾಗಿ ಮಕ್ಕಳು ಕಿಡ್ನಿ ವೈಫಲ್ಯದಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.
ಸಾವನ್ನಪ್ಪಿದ ಮಕ್ಕಳನ್ನು ಐದು ವರ್ಷದೊಳಗಿನವರು ಎಂದು ಹೇಳಲಾಗಿದ್ದು, ಎಲ್ಲಾ ಮಕ್ಕಳು ಮೊದಲು ಶೀತ ಮತ್ತು ಸೌಮ್ಯ ಜ್ವರದ ವಿಚಾರವಾಗಿ ಸ್ಥಳೀಯ ಕ್ಲಿನಿಕ್ ನಲ್ಲಿ ಚಿಕಿತ್ಸೆ ಪಡೆದಿದ್ದರು. ಸ್ಥಳೀಯ ವೈದ್ಯರು ಕೆಮ್ಮಿನ ಸಿರಪ್‌ಗಳು ಸೇರಿದಂತೆ ನಿಯಮಿತ ಔಷಧಗಳನ್ನು ಸೂಚಿಸಿದ್ದರು.
ಉನ್ನತ ಚಿಕಿತ್ಸೆಗಾಗಿ ಮಹಾರಾಷ್ಟ್ರದ ನಾಗ್ಪುರಕ್ಕೆ ಮಕ್ಕಳನ್ನು ಕರೆದೊಯ್ಯಲಾಗಿದ್ದರೂ, ಮೂವರು ಮಕ್ಕಳು ಅಲ್ಲಿಯೇ ಸಾವನ್ನಪ್ಪಿದರು.
ನಮ್ಮ ಮಕ್ಕಳು ಹಿಂದೆಂದೂ ಅನಾರೋಗ್ಯಕ್ಕೆ ಒಳಗಾಗಿರಲಿಲ್ಲ. ಈ ಬಾರಿ ಅವರಿಗೆ ಸಣ್ಣ ಜ್ವರವಿತ್ತು. ಸಿರಪ್ ನಂತರ, ಅವರ ಮೂತ್ರ ನಿಂತುಹೋಯಿತು. ನಾವು ಅವರನ್ನು ಉಳಿಸಲು ಸಾಧ್ಯವಾಗಲಿಲ್ಲ ಎಂದು ಪೋಷಕರು ಅಳಲು ತೋಡಿಕೊಂಡಿದ್ದಾರೆ.
ಮಕ್ಕಳ ಸಾವಿಗೆ ಕೆಮ್ಮಿನ ಸಿರಪ್ ಕಾರಣ ಎಂದು ಶಂಕಿಸಲಾಗಿದ್ದು, ವಿಷಕಾರಿ ಡೈಥಿಲೀನ್ ಗ್ಲೈಕೋಲ್ ಬೆರೆಸಿದ ಕಲುಷಿತ ಕೆಮ್ಮಿನ ಸಿರಪ್ ಸಾವುಗಳಿಗೆ ಕಾರಣ ಎಂದು ತನಿಖಾಧಿಕಾರಿಗಳು ಶಂಕಿಸಿದ್ದಾರೆ.
ಹೆಚ್ಚಿನ ಸಂತ್ರಸ್ಥ ಮಕ್ಕಳಿಗೆ ಕೋಲ್ಡ್ರಿಫ್ ಮತ್ತು ನೆಕ್ಸ್ಟ್ರೋ-ಡಿಎಸ್ (Coldrif and Nextro-DS) ಸಿರಪ್‌ಗಳನ್ನು ನೀಡಲಾಗಿತ್ತು.
ಚಿಂದ್ವಾರ ಕಲೆಕ್ಟರ್ ಶೀಲೇಂದ್ರ ಸಿಂಗ್ ಅವರು ಜಿಲ್ಲೆಯಾದ್ಯಂತ ಎರಡು ಸಿರಪ್‌ಗಳ ಮಾರಾಟವನ್ನು ತಕ್ಷಣವೇ ನಿಷೇಧಿಸಿದ್ದಾರೆ.
ತೆಲುಗು ರಾಜ್ಯಗಳಲ್ಲಿ ಕಾಂತಾರ ಚಾಪ್ಟರ್ 1ಗೆ ಬಾಯ್ಕಾಟ್ ಬಿಸಿ- ಪವನ್ ಕಲ್ಯಾಣ್ ಬೆಂಬಲ
ರೇಣುಕಸ್ವಾಮಿ ಕೊಲೆ ಪ್ರಕರಣ: ದರ್ಶನ್ ಪಲ್ಲಂಗ ಕೇಳಿದ್ರೆ ಕೊಡಲು ಸಾಧ್ಯವಿಲ್ಲ
30 ದೇಶಗಳ 7 ಸಾವಿರ ಸ್ಕ್ರೀನ್‌ಗಳಲ್ಲಿ ಕಾಂತಾರ ಚಾಪ್ಟರ್ 1 ನಾಳೆ ರಿಲೀಸ್