Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನಾಯಿ ಬೊಗಳಿದ್ದಕ್ಕೆ ಯುವತಿಯನ್ನು ವಿವಸ್ತ್ರಗೊಳಿಸಿ ಹಲ್ಲೆಗೈದ ನಟಿ!
ದೇಶಪ್ರಮುಖಮನರಂಜನೆ

ನಾಯಿ ಬೊಗಳಿದ್ದಕ್ಕೆ ಯುವತಿಯನ್ನು ವಿವಸ್ತ್ರಗೊಳಿಸಿ ಹಲ್ಲೆಗೈದ ನಟಿ!

Share
1 Min Read
SHARE

Subscribe NewsicsKannada/YouTube

newsics.com

ಹೈದ್ರಾಬಾದ್: ಇಲ್ಲಿನ ಶೇಖ್ ಪೇಟಾದ ವೆಸ್ಟ್ ವುಡ್ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುವ ನಟಿ ಡಿಂಪಲ್ ಹಯಾತಿ ಹಾಗೂ ಅವರ ಪತಿ ಡೇವಿಡ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಒಡಿಶಾದ 22 ವರ್ಷದ ಮನೆ ಕೆಲಸದಾಕೆ ಪ್ರಿಯಾಂಕಾ ಬೀಬರ್ ನೀಡಿದ ದೂರಿನ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ.
ಡಿಂಪಲ್ ಮತ್ತು ಡೇವಿಡ್ ತನ್ನ ಮೇಲೆ ಮಾನಸಿಕ ಹಾಗೂ ದೈಹಿಕ ದೌರ್ಜನ್ಯ ಎಸಗಿದ್ದಾರೆ ಎಂದು ಪ್ರಿಯಾಂಕಾ ಗಂಭೀರ ಆರೋಪ ಮಾಡಿದ್ದಾಳೆ.
ಪ್ರಿಯಾಂಕಾ ಅವರ ದೂರಿನ ಪ್ರಕಾರ, ಮಂಗಳವಾರ ಬೆಳಗ್ಗೆ ಡಿಂಪಲ್‌ರ ಮನೆಯಲ್ಲಿ ಸಾಕು ನಾಯಿ ಬೊಗಳಿದ ಕಾರಣಕ್ಕೆ ದಂಪತಿ ಆಕೆಯನ್ನು ಅಶ್ಲೀಲ ಭಾಷೆಯಲ್ಲಿ ನಿಂದಿಸಿದ್ದಾರೆ. ಅಷ್ಟೇ ಅಲ್ಕದೆ, ಆಕೆಯನ್ನು ವಿವಸ್ತ್ರಗೊಳಿಸಿ, ಬೆತ್ತಲೆಯಾಗಿ ನಿಲ್ಲಿಸಿ ಹೊಡೆಯಲು ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಘಟನೆಯ ವೀಡಿಯೊ ರೆಕಾರ್ಡ್ ಮಾಡಲು ಪ್ರಯತ್ನಿಸಿದಾಗ, ಡೇವಿಡ್ ಆಕೆಯ ಫೋನ್ ಅನ್ನು ಬಲವಂತವಾಗಿ ಕಿತ್ತು ಕೆಳಗೆ ಎಸೆದಿದ್ದಾರೆ. ಅಲ್ಲದೆ, ಸಂಬಳ ನೀಡದೆ ಕೆಲಸಕ್ಕೆ ಒತ್ತಾಯಿಸಿದ್ದಾರೆ ಎಂದು ಪ್ರಿಯಾಂಕಾ ದೂರಿನಲ್ಲಿ ತಿಳಿಸಿದ್ದಾಳೆ.
ಡಿಂಪಲ್‌ರ ಸಾಕು ನಾಯಿಗಳ ಆರೈಕೆಗಾಗಿ ಒಡಿಶಾದ ಇಬ್ಬರು ಯುವತಿಯರನ್ನು ನೇಮಿಸಿಕೊಳ್ಳಲಾಗಿತ್ತು. ಆದರೆ, ಕೆಲಸಕ್ಕೆ ಸರಿಯಾದ ಸೌಲಭ್ಯಗಳಿಲ್ಲದೆ, ಮಾನಸಿಕ ಮತ್ತು ದೈಹಿಕ ಕಿರುಕುಳಕ್ಕೆ ಒಳಗಾಗಿದ್ದೇವೆ ಎಂದು ಯುವತಿಯರು ಆರೋಪಿಸಿದ್ದಾರೆ. ನಮ್ಮ ವಕೀಲರು ನಮ್ಮನ್ನು ರಕ್ಷಿಸುತ್ತಾರೆ, ನೀವು ಏನು ಮಾಡೋಕೆ ಸಾಧ್ಯ? ಎಂದು ಡಿಂಪಲ್ ದಂಪತಿಗಳು ಅವಮಾನಕಾರಿ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಪ್ರಿಯಾಂಕಾ ಹೇಳಿದ್ದಾಳೆ.

ಈ ಆರೋಪಗಳಿಂದಾಗಿ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೊ ವೈರಲ್ ಆಗಿದ್ದು, ವಿಷಯ ಭಾರೀ ಚರ್ಚೆಗೆ ಗುರಿಯಾಗಿದೆ.
ಮೊದಲು, ಡಿಂಪಲ್ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಪಾರ್ಕಿಂಗ್ ವಿಷಯದಲ್ಲಿ ಡಿಸಿಪಿ ರಾಹುಲ್ ಹೆಗ್ಡೆ ಅವರೊಂದಿಗೆ ಜಗಳವಾಡಿದ್ದರು. ಇದು ವಿವಾದಕ್ಕೆ ಕಾರಣವಾಗಿತ್ತು. ಗಲ್ಫ್ ಚಿತ್ರದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ಡಿಂಪಲ್, ಖಿಲಾಡಿ, ಯುರೇಖಾ, ರಾಮಬನಂ ಮತ್ತು ವರುಣ್ ತೇಜ್ ಅವರ ಗದ್ದಲಕೊಂಡ ಗಣೇಶ್ ಚಿತ್ರದ ವಿಶೇಷ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ.

Strange incident ಪತಿ ಜತೆ ಮಲಗಿದ್ದ‌ ಪತ್ನಿಗೆ ಮಂಚದ ಕೆಳಗಿದ್ದ ಅಪರಿಚಿತನಿಂದ ಲೈಂಗಿಕ ಕಿರುಕುಳ!

Baby born with IUD coil ಐಯುಡಿ ಸುರುಳಿ ಹಿಡಿದೇ ಹುಟ್ಟಿದ ಮಗು! ಇಲ್ಲೀಗ ಇದರದ್ದೇ ಚರ್ಚೆ

ಬಿಗ್‌ಬಾಸ್ ಮನೆಯಲ್ಲಿ ಇತಿಹಾಸ ಸೃಷ್ಟಿಸಿದ ಮಲ್ಲಮ್ಮ: ಬಿಗ್‌ಬಾಸ್‌ ಮೆಚ್ಚುಗೆ

TAGGED:Actress Dimple Hayati undressed and assaulted a young woman for barking at her dog
Share This Article
Facebook Twitter Copy Link Print
Previous Article ಕೂಡಿಟ್ಟ ಗೃಹಲಕ್ಷ್ಮಿ ಹಣದಿಂದ ವಾಷಿಂಗ್ ಮಷೀನ್ ಖರೀದಿಸಿ ಮಹಿಳೆ – ಸಿಎಂ ಏನಂದ್ರು ?
Next Article ಖ್ಯಾತ ಶಾಸ್ತ್ರೀಯ ಸಂಗೀತ ಗಾಯಕ ಪಂಡಿತ್ ಛನ್ನುಲಾಲ್ ಮಿಶ್ರಾ ನಿಧನ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?