Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಿಶ್ವ ವಿಖ್ಯಾತ ಜಂಬೂ ಸವಾರಿಗೆ ಸಿಎಂ ಚಾಲನೆ;ಚಾಮುಂಡೇಶ್ವರಿಯ ಉತ್ಸವ ಮೂರ್ತಿ ಹೊತ್ತು ಸಾಗಿದ ಅಭಿಮನ್ಯು
ಕರ್ನಾಟಕಪ್ರಮುಖ

ವಿಶ್ವ ವಿಖ್ಯಾತ ಜಂಬೂ ಸವಾರಿಗೆ ಸಿಎಂ ಚಾಲನೆ;ಚಾಮುಂಡೇಶ್ವರಿಯ ಉತ್ಸವ ಮೂರ್ತಿ ಹೊತ್ತು ಸಾಗಿದ ಅಭಿಮನ್ಯು

Share
2 Min Read
SHARE

Newsics_Kannada

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾದ ಆಕರ್ಷಣೆಯ ಕೇಂದ್ರಬಿಂದುವಾಗಿರುವ ಜಂಬೂ ಸವಾರಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.

ವಿಶ್ವವಿಖ್ಯಾತ 416ನೇ ಜಂಬೂ ಸವಾರಿ ಆರಂಭವಾಗಿದ್ದು, ಇದೀಗ ಆರನೇ ಬಾರಿ ಅಂಬಾರಿ ಹೊತ್ತು ಅಭಿಮನ್ಯು ಅರಮನೆ ಬಲರಾಮ ಬಾಗಿಲಿನಿಂದ ಹೊರ ಬಂದಿದ್ದಾನೆ.
ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಿದ ಸಿಎಂ

ಅಭಿಮನ್ಯುವಿಗೆ ಎಡ ಹಾಗೂ ಬಲ ಭಾಗದಲ್ಲಿ ರೂಪ ಹಾಗೂ ಕಾವೇರಿ ಕುಮ್ಕಿ ಆನೆಗಳಾಗಿ ಸಾಥ್‌ ಕೊಟ್ಟಿದ್ದು, ಸಂಜೆ 4.42 ಗಂಟೆಯಿಂದ 5.16ರ ನಡುವೆ ಶುಭ ಕುಂಭ ಲಗ್ನದಲ್ಲಿ ವಿಜಯದಶಮಿ ಮೆರವಣಿ ಜಂಬೂ ಸವಾರಿಗೆ ಚಾಲನೆ ಸಿಕ್ಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ರಾಜವಂಶಸ್ಥ ಯದುವೀರ್, ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ,ಸೇರಿದಂತೆ ವಿವಿಧ ಗಣ್ಯರು ಚಾಮುಂಡೇಶ್ವರಿ ತಾಯಿಗೆ ಪುಷ್ಪಾರ್ಚನೆ ಮಾಡಿ ಚಾಲನೆ ಕೊಟ್ಟಿದ್ದಾರೆ. ಈ ಸಂದರ್ಭದಲ್ಲಿ ರಾಷ್ಟ್ರಗೀತೆಯನ್ನು ನುಡಿಸಲಾಗಿದ್ದು,ಅದರ ಜೊತೆಗೆ ಪಿರಂಗಿ ದಳವು 21 ಸುತ್ತು ಕುಶಾಲತೋಪುಗಳನ್ನು ಸಿಡಿಸಿ ಜಂಬೂ ಸವಾರಿಯನ್ನ ಅಧಿಕೃತವಾಗಿ ಚಾಲನೆ ನೀಡಿದೆ.
ಇನ್ನು ಅರಮನೆಯಿಂದ ಬಲರಾಮ ದ್ವಾರದಿಂದ ಈ ಜಂಬೂ ಸವಾರಿ ಆರಂಭವಾಗಿದ್ದು, ಚಾಮರಾಜ ವೃತ್ತ, ಕೆ.ಆರ್. ಸರ್ಕಲ್‌, ಸಯ್ಯಾಜಿರಾವ್ ರಸ್ತೆ, ಆಯುರ್ವೇದಿಕ್ ವೃತ್ತ, ಬಂಬೂ ಬಜಾರ್ ಹೈವೇ ಸರ್ಕಲ್ ಮೂಲಕ ಬನ್ನಿಮಂಟಪಕ್ಕೆ ಈ ಜಂಬೂ ಸವಾರಿ ಸಾಗಲಿದೆ. ನಂತರ ಸಂಜೆ 7 ಗಂಟೆಗೆ ರಾಜ್ಯಪಾಲರು ಹಾಗೂ ಸಿಎಂ ಸಮ್ಮುಖದಲ್ಲಿ ಪಂಜಿನ ಕವಾಯತು ಸಹ ನಡೆಯಲಿದೆ.
750 ಕೆಜಿ ತೂಕದ ಅಂಬಾರಿ
59 ವರ್ಷದ ಅಭಿಮನ್ಯು 6ನೇ ಬಾರಿ 750 ಕೆಜಿ ತೂಕದ ಅಂಬಾರಿಯನ್ನ ಹೊರುತ್ತಿದ್ದು, ಧನಂಜಯ ನಿಶಾನೆ ಆನೆಯಾಗಿ ಹಾಗೂ ಗೋಪಿ ನೌಫತ್‌ ಆನೆಯಾಗಿ ಕಾರ್ಯನಿರ್ವಹಣೆ ಮಾಡುತ್ತಿದೆ. ಸುಮಾರು 5 ಕಿಮೀ ಈ ಜಂಬೂ ಸವಾರಿ ನಡೆಯಲಿದ್ದು, ಮೈಸೂರಿನಾದ್ಯಂತ ಬಿಗಿ ಬಂದೋಬಸ್ತ್‌ ಮಾಡಲಾಗಿದೆ. ಈ ಅಪರೂಪದ ಕೋಟ್ಯಂತರ ಜನರು ಕ್ಷಣವನ್ನು ಕಣ್ತುಂಬಿಕೊಳ್ಳುತ್ತಿದ್ದು, ಅದಕ್ಕೆ ಬೇಕಾದ ವ್ಯವಸ್ಥೆಗಳನ್ನ ಸಹ ಮಾಡಲಾಗಿದೆ.

ಹಾಗೆಯೇ, ಜಂಬೂ ಸವಾರಿ ವೀಕ್ಷಣೆ ಮಾಡುವ ಅಂಬಾವಿಲಾಸ ಅರಮನೆ ಮುಂಭಾಗದಲ್ಲಿ ಬರುವವರಿಗೆ ಮೈಸೂರು ಜಿಲ್ಲಾಡಳಿತದ ವತಿಯಿಂದ ಸುಮಾರು 45 ಸಾವಿರ ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದ್ದು, ಜಂಬೂ ಸವಾರಿ ಹಿನ್ನೆಲೆಯಲ್ಲಿ ಮೆರವಣಿಗೆ ಸಾಗುವ ಮಾರ್ಗದ ಉದ್ದಕ್ಕೂ ಪೊಲೀಸರು ಹದ್ದಿನ ಕಣ್ಣು ಇಟ್ಟಿದ್ದು, ಡ್ರೋನ್‌ ಮೂಲಕ ಸಹ ಕಣ್ಗಾವಲು ಇಡಲಾಗಿದೆ. ಈ ಜಂಬೂ ಸವಾರಿ ಸಮಯದಲ್ಲಿ ಮೈಸೂರು ನಗರದಲ್ಲಿ ಭದ್ರತೆ ಕಾಪಾಡುವ ನಿಟ್ಟಿನಲ್ಲಿ ಸುಮಾರು 6,384 ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ಕಾಳಸಂತೆಯಲ್ಲಿ ದಸರಾ ಪಾಸ್ ಮಾರಾಟ; ಎಲ್ಲೆಡೆ ಜನರ ಪರದಾಟ, ನೂಕುನುಗ್ಗಲು, ಯುವತಿ ಅಸ್ವಸ್ಥ, ಓರ್ವ ಪೊಲೀಸ್ ವಶಕ್ಕೆ

TAGGED:CM launches world-famous Jambu Savari; Abhimanyu carries Chamundeshwari's festival idol
Share This Article
Facebook Twitter Copy Link Print
Previous Article ಕಾಳಸಂತೆಯಲ್ಲಿ ದಸರಾ ಪಾಸ್ ಮಾರಾಟ; ಎಲ್ಲೆಡೆ ಜನರ ಪರದಾಟ, ನೂಕುನುಗ್ಗಲು, ಯುವತಿ ಅಸ್ವಸ್ಥ, ಓರ್ವ ಪೊಲೀಸ್ ವಶಕ್ಕೆ
Next Article Mysuru Dasara ಚಿನ್ನದಂಬಾರಿಯಲ್ಲಿ ಚಾಮುಂಡೇಶ್ವರಿ ವೈಭವ, ಅಭಿಮನ್ಯುವಿನ ಗಾಂಭೀರ್ಯದ ಹೆಜ್ಜೆಗೆ ಮನಸೋತ ಜನ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?