Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ ಆರ್ಭಟ ಜೋರಾಗಿದೆ. ಅಕ್ಟೋಬರ್ 5ರವರೆಗೆ ವಿವಿಧ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಬೆಳಗಾವಿ, ಕಲಬುರಗಿ ಸೇರಿದಂತೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ವರುಣನ ಆರ್ಭಟ ಮುಂದುವರೆದಿದೆ. ಇನ್ನೂ 4 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ದೇಶದ ವಿವಿಧ ಭಾಗದಲ್ಲಿ ನೈರುತ್ಯ ಮಾನ್ಸೂನ್ ಅಂತ್ಯವಾಗುತ್ತಿದೆ. ಆದರೆ ಕರ್ನಾಟಕ, ಕೇರಳ ಹಾಗೂ ಮಹಾರಾಷ್ಟ್ರದಲ್ಲಿದ ವಿವಿಧ ಭಾಗದಲ್ಲಿ ಭಾರೀ ಮಳೆ ಆಗುತ್ತಿದೆ.