Subscribe NewsicsKannada/YouTube
newsics.com
ಮೈಸೂರು: ಖಾಕಿ ಕಣ್ಗಾವಲು ಜಂಬೂ ಸವಾರಿ ಹಿನ್ನೆಲೆಯಲ್ಲಿ ನಗರದಾದ್ಯಂತ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದ್ದು, ಅರಮನೆ ಸುತ್ತಮುತ್ತ ಹಾಗೂ ಜಂಬೂ ಸವಾರಿ ಸಾಗುವ ಮಾರ್ಗದಲ್ಲಿ ಹದ್ದಿನ ಕಣ್ಣಿಡಲಾಗಿದೆ.
6400ಕ್ಕೂ ಹೆಚ್ಚು ಪೊಲೀಸರನ್ನು ಬಂದೋಬಸ್ತ್ಗಾಗಿ ನಿಯೋಜಿಸಲಾಗಿದ್ದು, ಹೆಜ್ಜೆ, ಹೆಜ್ಜೆಗೂ ಪೊಲೀಸರೇ ಭದ್ರಕೋಟೆಯಂತೆ ನಿಂತು ಅನ್ನಾಹಾರವಿಲ್ಲದೆ ನಿರಂತರವಾಗಿ ಕೆಲಸ ನಿರ್ವಹಿಸಿದರು.
2 ಡಿಐಜಿ, 27 ಎಸ್ಪಿ, 919 ಡಿವೈಎಸ್ಪಿ, ಎಸಿಪಿ, ಇನ್ಸ್ಪೆಕ್ಟರ್ ಇತರೆ ಅಧಿಕಾರಿಗಳು ಮತ್ತು ಸಿಬ್ಬಂದಿ ಸೇರಿ ಒಟ್ಟು 4999 ಸಿಬ್ಬಂದಿ, 1500 ಹೋಂ ಗಾರ್ಡ್ಗಳನ್ನು ಭದ್ರತೆಗೆ ನಿಯೋಜಿಸಲಾಗಿತ್ತು.
ಇದರ ಜತೆಗೆ 10 ಸಿಎಆರ್, 33 ಕೆಎಸ್ಆರ್ಪಿ, 29 ಎಎಸ್ಸಿ, 3 ಬಿಡಿಡಿಎಸ್, 1 ಗರುಡ ಪಡೆ, 1 ಐಎಸ್ಡಿ, ಸಿಐಇಡಿ ತುಕಡಿ ನಿಯೋಜಿಸಲಾಗಿದೆ.
ಜಂಬೂ ಸವಾರಿ ಸಾಗುವ ಮಾರ್ಗದಲ್ಲಿ ಭಾರೀ ಪ್ರಮಾಣದಲ್ಲಿ ಸಿಸಿ ಟಿವಿ ಕ್ಯಾಮೆರಾ ಅಳವಡಿಸಿದ್ದು, ಡ್ರೋಣ್ಗಳು ಹಾರಾಟ ನಡೆಸಿ, ಅವುಗಳಲ್ಲಿ ಅಳವಡಿಸಿದ್ದ ಕ್ಯಾಮೆರಾ ಮೂಲಕ ದೃಶ್ಯಗಳನ್ನು ಸೆರೆ ಹಿಡಿಯಲಾಗುತ್ತಿತ್ತು. ಕಮಾಂಡೋ ಸೆಂಟರ್ ಮೂಲಕ ಪ್ರತಿಯೊಂದು ಚಟುವಟಿಕೆಯನ್ನು ವೀಕ್ಷಿಸಿ, ನಿರಂತರವಾಗಿ ಮಾರ್ಗದರ್ಶನವನ್ನು ಆಯಾ ಕಟ್ಟಿನ ಪೊಲೀಸರಿಗೆ ಮಾಡಲಾಯಿತು. ಅಳವಡಿಸಲಾಗಿದೆ. ಅರಮನೆಗೆ ಪ್ರವೇಶ ಮಾಡುವ ದ್ವಾರಗಳಲ್ಲಿ ಪೊಲೀಸ್ ಬಂದೋಬಸ್ತ್ ಮಾಡಿದ್ದು. ಗಣ್ಯರು, ಸಾರ್ವಜನಿಕರು ಪ್ರವೇಶಿಸುವ ಕಡೆ ತಪಾಸಣೆ ಮಾಡಲಾಯಿತು.
ಅರಮನೆ ಅಂಗಳದಲ್ಲಿ ಗಣ್ಯರು ಸಾರ್ವಜನಿಕರಿಗೆ 45 ಸಾವಿರ ಆಸನದ ವ್ಯವಸ್ಥೆ ಕಲ್ಪಿಸಲಾಗಿತ್ತು.
Mysuru Dasara ಚಿನ್ನದಂಬಾರಿಯಲ್ಲಿ ಚಾಮುಂಡೇಶ್ವರಿ ವೈಭವ, ಅಭಿಮನ್ಯುವಿನ ಗಾಂಭೀರ್ಯದ ಹೆಜ್ಜೆಗೆ ಮನಸೋತ ಜನ
ಕಾಳಸಂತೆಯಲ್ಲಿ ದಸರಾ ಪಾಸ್ ಮಾರಾಟ; ಎಲ್ಲೆಡೆ ಜನರ ಪರದಾಟ, ನೂಕುನುಗ್ಗಲು, ಯುವತಿ ಅಸ್ವಸ್ಥ, ಓರ್ವ ಪೊಲೀಸ್ ವಶಕ್ಕೆ