Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ಹಬ್ಬದ ಸಮಯದಲ್ಲಿ ಚಿನ್ನ ಖರೀದಿಸಲು ತಯಾರಿ ನಡೆಸುತ್ತಿರುವವರಿಗೆ ದೊಡ್ಡ ಸಿಹಿ ಸುದ್ದಿ. ಕಳೆದ ಕೆಲವು ದಿನಗಳಿಂದ ಚಿನ್ನದ ದರ ತೀವ್ರವಾಗಿ ಏರುತ್ತಿದೆ.. ಇದರ ಪರಿಣಾಮವಾಗಿ, ಇದು ಸಾರ್ವಕಾಲಿಕ ದಾಖಲೆಗಳನ್ನು ದಾಖಲಿಸುತ್ತಿದೆ. ಆದರೆ ಇಂದು ಚಿನ್ನದ ಬೆಲೆ ಕಡಿಮೆಯಾಗಿದೆ.
ಕಳೆದ ವಾರದಲ್ಲಿ, 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ಸುಮಾರು 5,000 ರೂ.ಗಳಷ್ಟು ಹೆಚ್ಚಾಗಿದೆ. ಆದರೆ, ಒಂದು ವಾರದ ನಂತರ, ಇಂದು ಚಿನ್ನದ ಬೆಲೆ ಗಮನಾರ್ಹವಾಗಿ ಕಡಿಮೆಯಾಗಿದೆ.
ಆಭರಣ ಚಿನ್ನದ ಬೆಲೆ ಗ್ರಾಮ್ಗೆ 60 ರೂ ಕಡಿಮೆ ಆಗಿದೆ. ಬೆಳ್ಳಿ ಬೆಲೆ 2 ರೂ ಇಳಿದಿದೆ. 22 ಕ್ಯಾರಟ್ ಚಿನ್ನದ ಬೆಲೆ 10,880 ರೂನಿಂದ 10,820 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 11,804 ರೂಗೆ ತಗ್ಗಿದೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,08,200 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,18,040 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 15,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,08,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 15,100 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,804 ರೂ
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 10,820 ರೂ
18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 8,853 ರೂ
ಬೆಳ್ಳಿ ಬೆಲೆ 1 ಗ್ರಾಂಗೆ: 151 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,804 ರೂ
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 10,820 ರೂ
ಬೆಳ್ಳಿ ಬೆಲೆ 1 ಗ್ರಾಂಗೆ: 151 ರೂ