Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ಚಾಮರಾಜನಗರದ ಮಲೆ ಮಹದೇಶ್ವರ ವನ್ಯಧಾಮದಲ್ಲಿ ಹುಲಿಯ ಅರ್ಧ ಕಳೇಬರ ಪತ್ತೆಯಾಗಿದ್ದು, ಕಳ್ಳಬೇಟೆಗಾರರ ಕೈವಾಡದ ಅನುಮಾನ ಸೃಷ್ಟಿಯಾಗಿದೆ. ಹನೂರು ತಾಲ್ಲೂಕಿನ ಪಚ್ಚೆದೊಡ್ಡಿ ಗ್ರಾಮದ ಬಳಿ ಮಣ್ಣಿನಲ್ಲಿ ಹುದುಗಿಸಿದ್ದ ಹುಲಿಯ ತಲೆ, ಭುಜ ಮತ್ತು ಮುಂಗಾಲುಗಳು ಲಭ್ಯವಾಗಿವೆ.
ನಿನ್ನೆ ಸತ್ತ ಹುಲಿಯ ಅರ್ಧ ಕಳೇಬರ ಪತ್ತೆಯಾಗಿರುವ ಬಗ್ಗೆ ಪಿಸಿಸಿಎಫ್ ಸ್ಮಿತಾ ಬಿಜ್ಜೂರು ಅವರ ನೇತೃತ್ವದಲ್ಲಿ ತಂಡವೊಂದನ್ನು ರಚಿಸಿ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲಿಸಲು ಆದೇಶಿಸುವಂತೆ ಸೂಚಿಸಿದ್ದಾರೆ.
ಈ ಸಂಬಂಧ ಪಿಸಿಸಿಎಫ್ ತಂಡದ ನೇತೃತ್ವದಲ್ಲಿ ತನಿಖೆ ನಡೆಸುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಆದೇಶಿಸಿದ್ದಾರೆ. ಪಿಸಿಸಿಎಫ್ ತಂಡದ ಸ್ಮಿತಾ ಬಿಜ್ಜೂರು ಅಧಿಕಾರಿಗಳ ನೇತೃತ್ವದಲ್ಲಿ 8 ದಿನಗಳಲ್ಲಿ ವರದಿ ಸಲ್ಲಿಸಿ, ಹುಲಿಯ ಹಂತಕರನ್ನು ಪತ್ತೆಮಾಡಲು ಮುಂದಾಗಬೇಕು ಎಂದು ಸಚಿವ ಖಂಡ್ರೆ ಸೂಚಿಸಿದ್ದಾರೆ.