Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ಬೆಂಗಳೂರು : ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸಂಬಂಧಿಸಿದಂತೆ ಕುಟುಂಬದ ಮಾಹಿತಿಯನ್ನು PDF ಮೂಲಕ ನೀಡದೇ ಇರುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಮೊಬೈಲ್ ನೆಟ್ವರ್ಕ್ ಇಲ್ಲದೇ ಇರುವ ಪ್ರದೇಶಗಳಲ್ಲಿ ವಿಶೇಷ ಶಿಬಿರಗಳಲ್ಲಿ ಆಯೋಜಿಸಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ನಡೆಸಲು ಹಾಗೂ ಪ್ರತಿ ಕುಟುಂಬದ ಸಮೀಕ್ಷೆ ಪೂರ್ಣಗೊಂಡ ಬಳಿಕ ಪಾರದರ್ಶಕತೆಯನ್ನು ಕಾಯ್ದುಕೊಳ್ಳುವ ದೃಷ್ಟಿಯಿಂದ ನಾಗರಿಕರು/ಕುಟುಂಬಗಳಿಗೆ ಅವರು ನೀಡಿದ ಮಾಹಿತಿಯ PDF ಅನ್ನು ಕಳುಹಿಸಲು ತಿಳಿಸಲಾಗಿತ್ತು.
ಮಾನ್ಯ ಉಚ್ಚ ನ್ಯಾಯಾಲಯ ಆದೇಶದ ಉಲ್ಲಂಘನೆಯಾಗಬಾರದೆಂಬ ಹಿನ್ನೆಲೆಯಲ್ಲಿ, ಕುಟುಂಬದ ಸಮೀಕ್ಷೆ ನಡೆಸಿದ ಬಳಿಕ PDF ಅನ್ನು Share ಮಾಡದೇ ಇರಲು ದಿನಾಂಕ: 03-10-2025 ರಂದು ನಡೆದ ಆಯೋಗದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಆದ್ದರಿಂದ, ಕುಟುಂಬದ ಸಮೀಕ್ಷೆ ಮುಗಿದ ಬಳಿಕ PDF Generate ಮಾಡಲು ಹಾಗೂ Share ಮಾಡಲು ಅವಕಾಶವಿರುವುದಿಲ್ಲ ಆದ್ದರಿಂದ ಮಾಹಿತಿಯನ್ನು Share ಮಾಡದಂತೆ ಕ್ರಮ ವಹಿಸಲು ಕೋರಿದೆ.