Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ಬೆಳಗಾವಿ: ಬೆಳಗಾವಿ ನಗರದ ಖಡಕ್ ಗಲ್ಲಿಯಲ್ಲಿ ಉರುಸ್ ವೇಳೆ ಐ ಲವ್ ಮೊಹಮ್ಮದ್ ಘೋಷಣೆ ಕೂಗಿದ ಅನ್ಯಕೋಮಿನ ಯುವಕರು, ಅಲ್ಲೇ ಅಕ್ಕಪಕ್ಕದಲ್ಲಿದ್ದ ಹಿಂದೂಗಳ ಮನೆಗಳ ಮೇಲೆ ಕಲ್ಲು ತೂರಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.
ಬಳಿಕ ತಲ್ವಾರ್ ಕೂಡ ಪ್ರದರ್ಶನ ಮಾಡಿ, ಗೂಂಡಾವರ್ತನೆ ತೋರಿದ್ದಾರಂತೆ. ವಿಷಯ ತಿಳಿದು ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಅಲ್ಲಿಂದ ಮುಂದಕ್ಕೆ ಉರುಸ್ ಮೆರವಣಿಗೆ ಕಳುಹಿಸಿದ್ದಾರೆ.
ಪ್ರತಿವರ್ಷದಂತೆ ಈ ವರ್ಷವೂ ಮಾಬುಸುಬಾನಿ ದರ್ಗಾ ಉರುಸ್ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಬೆಳಗಾವಿಯ ಖಡಕ್ ಗಲ್ಲಿ ಮೂಲಕ ಮೆರವಣಿಗೆ ಸಾಗಿದೆ. ಕೆಲ ಯುವಕರು ‘ಐ ಲವ್ ಮೊಹಮ್ಮದ್’ ಎಂಬ ಘೋಷಣೆ ಕೂಗುತ್ತಾ ತೆರಳಿದ್ದಾರೆ. ಇದು ಸ್ಥಳೀಯ ಹಿಂದೂಗಳನ್ನು ಕೆರಳಿಸಿದ್ದು ಇದಕ್ಕೆ ಆಕ್ಷೇಪಿಸಿದ್ದಾರೆ. ಆದರೆ, ಇದಾದ ಕೆಲಹೊತ್ತಿನಲ್ಲೇ ಅನ್ಯಕೋಮಿನ ಯುವಕರು ಹಿಂದೂಗಳ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ತಲ್ವಾರ್ ಪ್ರದರ್ಶಿಸಿ ಗೂಂಡಾವರ್ತನೆ ತೋರಿದ ಆರೋಪ ಕೇಳಿಬಂದಿದೆ.