Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ಬೆಂಗಳೂರು: ಕನ್ನಡದ ಬಿಗ್ ಬಾಸ್ ಸೀಸನ್-12 ಆರಂಭದಲ್ಲೇ ಹಲವು ಸಂಕಷ್ಟ ಎದುರಿಸುತ್ತಿದೆ. ಕೆಲವೇ ದಿನಗಳಲ್ಲಿ ಶೋ ಬಂದ್ ಆಗುತ್ತಾ ಎಂಬ ಪ್ರಶ್ನೆ ಮೂಡಿದೆ.
ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಇತ್ತೀಚೆಗೆ ನೋಟಿಸ್ ನೀಡಿತ್ತು, ಆದರೆ ಇದೀಗ ಬಿಗ್ ಬಾಸ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಕನ್ನಡ ಬಿಗ್ ಬಾಸ್ ರಿಯಾಲಿಟಿ ಶೋ ನಡೆಸಲು ಪೊಲೀಸರಿಂದ ಅನುಮತಿ ಪಡೆದಿಲ್ಲ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಮತ್ತೊಂದು ನೋಟಿಸ್ ನೀಡಲಾಗಿದೆ. ಕನ್ನಡ ಬಿಗ್ ಬಾಸ್ ರಿಯಾಲಿಟಿ ಶೋವನ್ನು ರಾಮನಗರದ ಬಿಡದಿ ಬಳಿಯ ೩೫ ಎಕರೆ ಪ್ರದೇಶದಲ್ಲಿರುವ ಜಾಲಿವುಡ್ ಸ್ಟುಡಿಯೋದಲ್ಲಿ ಪ್ರತ್ಯೇಕ ಸೆಟ್ ಹಾಕಿ ನಡೆಸಲಾಗುತ್ತಿದೆ. ಆದರೆ ಇದಕ್ಕೆ ಪೊಲೀಸರಿಂದ ಅನುಮತಿ ಸಿಕ್ಕಿಲ್ಲ ಎಂದು ತಿಳಿದುಬಂದಿದೆ.
ಈ ಹಿನ್ನೆಲೆಯಲ್ಲಿ ಬಿಗ್ ಬಾಸ್ ರಿಯಾಲಿಟಿ ಶೋ ಬಂದ್ ಮಾಡಿ ಜಾಲಿವುಡ್ ಸ್ಟುಡಿಯೋಗೆ ಬೀಗ ಹಾಕುವಂತೆ ವರದಿಯಾಗಿದೆ. ಅನಧೀಕೃತವಾಗಿ ಇಲ್ಲಿ ಶೋ ನಡೆಸಲಾಗುತ್ತಿದೆ ಎಂದುಈ ಹಿಂದೆ ವಿದ್ಯುತ್ ಕಡಿತಕ್ಕೂ ಸೂಚನೆ ನೀಡಲಾಗಿತ್ತು. ಇದೀಗ ಪೊಲೀಸರಿಂದ ಅನುಮತಿ ಪಡೆದಿಲ್ಲ ಎಂಬ ಕಾರಣಕ್ಕೆ ಮತ್ತೊಂದು ನೋಟಿಸ್ ನೀಡಲಾಗಿದೆ.