Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ಬೆಂಗಳೂರು: ಕನ್ನಡ ಬಿಗ್ ಬಾಸ್ ಸೀಸನ್-12 ಶುರುವಾದ ಒಂದೇ ವಾರದಲ್ಲಿ ಬಿಗ್ ಬಾಸ್ ಮನೆಗೆ ಬೀಗ ಹಾಕಲಾಗಿದೆ.
ಅನುಮತಿ ಪಡೆಯದ ಹಿನ್ನೆಲೆಯಲ್ಲಿ ಜಾಲಿವುಡ್ ಸ್ಟುಡಿಯೋಗೆ ಮಂಗಳವಾರ ಸಂಜೆ ಅಧಿಕಾರಿಗಳು ಬೀಗಮುದ್ರೆ ಹಾಕಿದ್ದಾರೆ.
ರಾಮನಗರದ ಬಿಡದಿ ಬಳಿಯ 35 ಎಕರೆ ಪ್ರದೇಶದಲ್ಲಿರುವ ಜಾಲಿವುಡ್ ಸ್ಟುಡಿಯೋದಲ್ಲಿ ಪ್ರತ್ಯೇಕ ಸೆಟ್ ಗಳನ್ನು ಹಾಕಿ ಕನ್ನಡ ಬಿಗ್ ಬಾಸ್ ಸೀಸನ್ -12ನ್ನು ನಡೆಸಲಾಗುತ್ತಿದೆ. ಆದರೆ ಬಿಗ್ ಬಾಸ್ ಶೋ ಹಾಗೂ ಸೆಟ್ ಗಳಲ್ಲಿ ಮಾಲಿನ್ಯ ನಿಯಂತ್ರಣದ ನಿಯಮ ಉಲ್ಲಂಘನೆ ಮಾಡಲಾಗಿದೆ. ಜಾಲಿವುಡ್ ಸ್ಟುಡಿಯೋ ಕೂಡ ನಿಯಮ ಉಲ್ಲಂಘನೆ ಮಾಡಿದೆ ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ಜಾರಿ ಮಾಡಿತ್ತು. ಈಗ ಅಧಿಕಾರಿಗಳು ಬೀಗಮುದ್ರೆ ಹಾಕಿದ್ದಾರೆ.
ಇದೇ ವೇಳೆ ಜಾಲಿವುಡ್ ಸ್ಟುಡಿಯೋವಾಗಲಿ, ಬಿಗ್ ಬಾಸ್ ಶೋ ತಂಡವಾಗಲಿ ಶೋ ನಡೆಸಲು ಇಲ್ಲಿ ಪೊಲೀಸರಿಂದ ಯಾವುದೇ ಅನುಮತಿ ಪಡೆದಿಲ್ಲ. ಅನಧಿಕೃತವಾಗಿ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬಿಗ್ ಬಾಸ್ ಶೋ ಸ್ಥಗಿತಗೊಳಿಸುವಂತೆ ಪೊಲೀಸರು ಕೂಡ ನೋಟಿಸ್ ಜಾರಿ ಮಾಡಿದ್ದಾರೆ.