Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ಕೊಪ್ಪಳ: ಖಾಸಗಿ ಸ್ಲೀಪರ್ ಕೋಚ್ ಬಸ್ ಹರಿದು ಮೂವರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಕೊಪ್ಪಳ ಜಿಲ್ಲೆ ಕೂಕನಪಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಘಟನೆ ನಡೆದಿದೆ.
ಅನ್ನಪೂರ್ಣ(40), ಪ್ರಕಾಶ್(25) ಶರಣಪ್ಪ(19) ಮೃತಪಟ್ಟವರು ಎಂದು ಹೇಳಲಾಗಿದೆ. ಮೃತರು ಗದಗ ಜಿಲ್ಲೆ ರೋಣ ತಾಲೂಕಿನ ತಳ್ಳಿಹಾಳ ಗ್ರಾಮದವರಾಗಿದ್ದಾರೆ. ಕೊಪ್ಪಳ ತಾಲೂಕಿನ ಹುಲಿಗಿ ಗ್ರಾಮದ ಹುಲಿಗೆಮ್ಮ ದೇವಸ್ಥಾನಕ್ಕೆ ಪಾದಯಾತ್ರೆ ಹೋಗುತ್ತಿದ್ದರು. ಈ ವೇಳೆ ಸಿಂದಗಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಕೋಚ್ ಬಸ್ ಡಿಕ್ಕಿ ಹೊಡೆದಿದೆ. ಮೂವರು ಸಾವನ್ನಪ್ಪಿದ್ದಾರೆ. ನಾಲ್ವರು ಗಾಯಗೊಂಡಿದ್ದು, ಗಾಯಾಳುಗಳನ್ನು ಕೊಪ್ಪಳ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುನಿರಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಎಸ್ಪಿ ರಾಮ್ ಅರಸಿದ್ದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.