Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಿಗ್ ಬಾಸ್ ಬಂದ್ ಹಿಂದೆ ರಾಜಕೀಯ ದ್ವೇಷ: ಯಾರದ್ದು ಕೈವಾಡ?
ಕರ್ನಾಟಕಪ್ರಮುಖಮನರಂಜನೆ

ಬಿಗ್ ಬಾಸ್ ಬಂದ್ ಹಿಂದೆ ರಾಜಕೀಯ ದ್ವೇಷ: ಯಾರದ್ದು ಕೈವಾಡ?

Share
2 Min Read
SHARE

newsics.com

ಬಿಗ್ ಬಾಸ್ ಕನ್ನಡ ಸೀಸನ್ 12 ತಾತ್ಕಾಲಿಕವಾಗಿ ಬಂದ್ ಆಗಿದೆ.ನಿಯಮ ಉಲ್ಲಂಘನೆ ಆರೋಪದಡಿ ಬಿಗ್ಬಾಸ್ ನಿವಾಸ ಇದ್ದ ಜಾಲಿವುಡ್ ಸ್ಟುಡಿಯೋಕ್ಕೆ ಅಧಿಕಾರಿಗಳು ಬೀಗ ಜಡಿದಿದ್ದಾರೆ.ಬಿಗ್ಬಾಸ್ ಸ್ಪರ್ಧಿಗಳೆಲ್ಲ ಈಗ ಈಗಲ್ಟನ್ ರೆಸಾರ್ಟ್ನಲ್ಲಿದ್ದಾರೆ.ಬಿಗ್ಬಾಸ್ ಶೋ ಹಠಾತ್ತನೆ ಬಂದ್ ಆಗಿರುವುದಕ್ಕೆ ರಾಜಕೀಯ ದ್ವೇಷ ಕಾರಣ ಎಂಬ ಮಾತುಗಳು ಕೇಳಿ ಬರುತ್ತಿವೆ.ಬಿಗ್ಬಾಸ್ ಬಂದ್ ಹಿಂದೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಕೈವಾಡ ಇದೆಯೆಂದು ನೇರ ಆರೋಪ ಮಾಡಿದೆ ಜೆಡಿಸ್.’ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಡೆಯುತ್ತಿದ್ದ ಬಿಗ್ ಬಾಸ್ ರಿಯಾಲಿಟಿ ಷೋ ಬಂದ್ ಮಾಡಿಸಿ, ಕಲಾವಿದರ ಮೇಲೆ ಸೇಡು ತೀರಿಸಿಕೊಂಡ ‘ನಟ್ಟು ಬೋಲ್ಟ್ ಮಿನಿಸ್ಟರ್’ ಡಿಕೆ ಶಿವಕುಮಾರ್’ ಎಂದು ಜೆಡಿಎಸ್ ಟ್ವೀಟ್ ಮಾಡಿದೆ.ಜೊತೆಗೆ ಸಿನಿಮೋತ್ಸವ ಉದ್ಘಾಟನೆ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಕಲಾವಿದರಿಗೆ ನೀಡಿದ್ದ ಎಚ್ಚರಿಕೆಯ ವಿಡಿಯೋವನ್ನು ಸಹ ಟ್ವೀಟ್ ಜೊತೆಗೆ ಹಂಚಿಕೊಂಡಿದೆ.ಬಿಗ್ಬಾಸ್ ಸೆಟ್ ನಿರ್ಮಾಣವಾಗಿದ್ದ ಜಾಲಿವುಡ್ ಸ್ಟುಡಿಯೋಸ್ ಜೆಡಿಎಸ್ನ ಪ್ರಭಾವಿ ಮುಖಂಡರಿಗೆ ಸೇರಿದ ಸ್ಥಳವಾಗಿದ್ದು, ಇದೇ ಕಾರಣಕ್ಕೆ ರಾಜ್ಯದ ಪ್ರಮುಖ ರಾಜಕಾರಣಿಯೋರ್ವರು ತಮ್ಮ ಪ್ರಭಾವ ಬಳಸಿ ಬಿಗ್ಬಾಸ್ ಅನ್ನು ಬಂದ್ ಮಾಡಿಸಿದ್ದಾರೆ ಹಾಗೂ ಜಾಲಿವುಡ್ ಸ್ಟುಡಿಯೋಕ್ಕೆ ಬೀಗ ಹಾಕಿಸಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.ಬಿಗ್ಬಾಸ್ನ ನಿರೂಪಕ ಸುದೀಪ್ ಸಹ ಈ ಹಿಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಪ್ರಚಾರ ಮಾಡಿದ್ದು, ಇದೂ ಸಹ ರಾಜಕೀಯ ದ್ವೇಷಕ್ಕೆ ಕಾರಣ ಆಗಿರಬಹುದು ಎಂಬ ಮಾತುಗಳು ಸಾಮಾಜಿಕ ಜಾಲತಾಣದಲ್ಲಿ ಕೇಳಿ ಬರುತ್ತಿವೆ.ಬಿಗ್ಬಾಸ್ ಶೋ ಬಂದ್ ಮಾಡಿಸಿದ ಸರ್ಕಾರಕ್ಕೆ ಹಲವು ಪ್ರಶ್ನೆಗಳನ್ನು ಜೆಡಿಎಸ್ ಕೇಳಿದ್ದು, ‘ರಾಜ್ಯದಲ್ಲಿ ನಿರಂತರವಾಗಿ ನಡೆಯುತ್ತಿರುವ ರೈತರ ಆತ್ಮಹತ್ಯೆಗಳನ್ನು ಯಾವಾಗ ಬಂದ್ ಮಾಡಿಸುತ್ತೀರಾ? ರಾಜ್ಯದ ಜನರ ಮೇಲೆ ನಿರಂತರವಾಗಿ ತೆರಿಗೆ ಬರೆ ಎಳೆದು ಲೂಟಿ ಹೊಡೆಯುತ್ತಿರುವುದಕ್ಕೆ ಯಾವಾಗ ಬೀಗ ಹಾಕುತ್ತೀರಾ? ಬೆಲೆ ಏರಿಕೆಗಳ ಮೂಲಕ ಜನಸಾಮಾನ್ಯರನ್ನು ಪಿಕ್ ಪಾಕೆಟ್ ಮಾಡುತ್ತಿರುವ ನಿಮ್ಮ ಕಾಂಗ್ರೆಸ್ ಸರ್ಕಾರಕ್ಕೆ ಯಾವಾಗ ಬೀಗ ಹಾಕುತ್ತೀರಾ? ಉತ್ತರ ಕರ್ನಾಟಕದಲ್ಲಿ ನೆರೆ ಹಾವಳಿಯನ್ನು ತಡೆಯಲು ಯಾವ ರೀತಿ ಬೀಗ ಹಾಕಿಸುತ್ತೀರಾ? ರಾಜ್ಯದ ಜನರ ತೆರಿಗೆ ಹಣವನ್ನು ಅಕ್ರಮವಾಗಿ ವಾಮಮಾರ್ಗಗಳ ಮೂಲಕ ಹೈಕಮಾಂಡ್’ಗೆ ಕಪ್ಪ ಒಪ್ಪಿಸುತ್ತಿರುವುದಕ್ಕೆ ಯಾವಾಗ ಬೀಗ ಹಾಕಿಸುತ್ತೀರಾ? ಕರ್ನಾಟಕ ಕಾಂಗ್ರೆಸ್ ಸರ್ಕಾರದ 60% ಕಮಿಷನ್ ದಂಧೆಗೆ ಯಾವಾಗ ಬೀಗ ಹಾಕುತ್ತೀರಾ? ಕಾಂಗ್ರೆಸ್ ಶಾಸಕರು ಮತ್ತು ಕಾಂಗ್ರೆಸ್ ಪುಢಾರಿಗಳು ನಡೆಸುತ್ತಿರುವ ಕ್ಯಾಸಿನೋ ದಂಧೆ, ಅಕ್ರಮಗಳಿಗೆ ಯಾವಾಗ ಬೀಗ ಹಾಕಿಸುತ್ತೀರಾ? ಭ್ರಷ್ಟಾಚಾರದ ಕೂಪಗಳಾಗಿರುವ ಸರ್ಕಾರಿ ಇಲಾಖೆ, ಕಚೇರಿಗಳಿಗೆ ಯಾವಾಗ ಬೀಗ ಹಾಕಿಸುತ್ತೀರಾ? ಕೈಲಾಗದವರು ಮೈಪರಚಿಕೊಂಡಂತೆ ಇದೆ ಕಾಂಗ್ರೆಸ್ ಸರ್ಕಾರದ ದುರಾಡಳಿತ’ ಎಂದು ಟೀಕೆ ಮಾಡಿದೆ.https://x.com/JanataDal_S/status/1975612951588708641?ref_src=twsrc%5Etfw%7Ctwcamp%5Etweetembed%7Ctwterm%5E1975612951588708641%7Ctwgr%5E29ce8b710db822d2e8373cb28d162823a214efd2%7Ctwcon%5Es1_c10&ref_url=https%3A%2F%2Fapi-news.dailyhunt.in%2Fhttps://www.newsics.com/2025/10/08/bigg-boss-house-locked-hearing-in-high-court-today/

TAGGED:Political hatred behind the Bigg Boss bandh: Who is behind it?
Share This Article
Facebook Twitter Copy Link Print
Previous Article Big boss ಬಿಗ್ ಬಾಸ್ ಮನೆಗೆ ಬೀಗ: ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ
Next Article Singer Rajveer Jawanda passed away ಖ್ಯಾತ ಗಾಯಕ ರಾಜ್‌ ವೀರ್ ಜವಾಂಡಾ ಕೊನೆಗೂ ಬದುಕುಳಿಯಲಿಲ್ಲ

Popular Posts

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 17-6-2026, ಬುಧವಾರ, ಇಂದು‌ ಹೇಗಿದೆ ನಿಮ್ಮ ಅದೃಷ್ಟ?

4 Min Read

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

You Might Also Like

ಮನರಂಜನೆಪ್ರಮುಖ

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read
ಕರ್ನಾಟಕಪ್ರಮುಖ

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read
ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read

Social Networks

Facebook-f Instagram Twitter
Welcome Back!

Sign in to your account

Lost your password?