Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ಹಾಸನ: ಹಾಸನಾಂಬೆ ದೇವಾಲಯಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಭಕ್ತರು ಹಾಸನಾಂದೆ ದೇವಿ ದರ್ಶನಕ್ಕಾಗಿ ಆಗಮಿಸುತ್ತಿದ್ದಾರೆ. ಈ ಬಾರಿ ದೇವಾಲಯದ ಆಡಳಿತ ಮಂಡಳಿ ಕಟ್ಟುನಿಟ್ಟಿನ ಕ್ರಮಗಳನ್ನು ಹಾಗೂ ಭಕ್ತರಿಗಾಗಿ ವಿಶೇಷ ವ್ಯಸ್ಥೆಗಳನ್ನು ಮಾಡಿದೆ.
ಈಬಾರಿ ಹಾಸನಾಂಬೆ ದರ್ಶನಕ್ಕೆ ವಿಐಪಿ ಪಾಸ್ ರದ್ದುಗೊಳಿಸಲಾಗಿದೆ. ಅಲ್ಲದೇ ದೇವಾಲಯದ ಬಳಿ ಗಣ್ಯರ ಹಾಗೂ ಸಚಿವರ, ಶಾಸಕರ ವಾಹನಗಳ ಪ್ರವೇಶಕ್ಕೂ ಬ್ರೇಕ್ ಹಾಕಲಾಗಿದೆ. ದೇವ್ಬಸ್ಥಾನದ ಬಳಿ ಯಾವುದೇ ವಾಹನಗಳ ನಿಲುಗಡೆಗೆ ನಿರ್ಬಂಧ ವಿಧಿಸಲಾಗಿದ್ದು, ಎಲ್ಲೆಡೆ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಭಕ್ತರಿಗೆ, ಸಾರ್ವಜನಿಕರಿಗೆ ಯಾವುದೇ ತೊಂದರೆಗಳು ಆಗದಂತೆ ಕಟ್ಟೆಚ್ಚರ ವಹಿಸಲಾಗಿದೆ.
ಸಚಿವರು, ಶಾಸಕರು, ಗಣ್ಯಾತಿಗಣ್ಯರ ವಾಹನಗಳನ್ನು ಪ್ರವಾಸಿ ಮಂದಿರದ ಬಳಿಯೇ ನಿಲುಗಡೆ ಮಾಡುವ ವ್ಯವಸ್ಥೆ ಮಾಡಲಾಗಿದೆ.