newsics.com
ಪಾನಿ ಪುರಿಕ್ಕಿಂತ ಆರೋಗ್ಯಕರ ಚಾಟ್ ಮತ್ತೊಂದಿಲ್ಲ. ಹೌದು ಈ ಮಾತು ಕೇಳಿ ಕೆಲವರಿಗೆ ಬಹಳ ಆಶ್ಚರ್ಯವಾಗಬಹುದು ಆದರೆ ಇದು ಸತ್ಯ. ಪಾನಿ ಪುರಿಯಲ್ಲಿ ನೀವು ಊಹಿಸಲು ಸಾಧ್ಯವಾಗದಷ್ಟು ಆರೋಗ್ಯ ಪ್ರಯೋಜನಗಳಿವೆ. ಇದನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ಸಾಕಷ್ಟು ಲಾಭಗಳಿವೆ.
ಹೃದಯದ ಆರೋಗ್ಯ ಕಾಪಾಡುತ್ತದೆ
ಪುದೀನ, ಹುಣಸೆ, ಶುಂಠಿ ಮತ್ತು ಕೊತ್ತಂಬರಿ ಸೊಪ್ಪಿನಿಂದ ಮಾಡಿದ ಪಾನಿ ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಪಾನಿ ಪುರಿಯ ನೀರಿನಲ್ಲಿರುವ ಹುಣಸೆ ಮತ್ತು ಶುಂಠಿ ರಕ್ತನಾಳಗಳನ್ನು ಸಡಿಲಗೊಳಿಸಲು ಮತ್ತು ಹೃದಯದ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಪಾನಿ ಪುರಿ ನೀರಿಗೆ ಪುದೀನ ಮತ್ತು ಕೊತ್ತಂಬರಿ ಸೊಪ್ಪನ್ನು ಕೂಡ ಸೇರಿಸಲಾಗುತ್ತದೆ. ಇದು ದೇಹದಿಂದ ವಿಷವನ್ನು ಹೊರಹಾಕಲು ಸಹಾಯ ಮಾಡುತ್ತದೆ. ಮಾತ್ರವಲ್ಲ ಯಕೃತ್ತು ಮತ್ತು ಜೀರ್ಣಾಂಗ ವ್ಯವಸ್ಥೆಯನ್ನು ಸಹ ಬಲಪಡಿಸುತ್ತದೆ.
ಜೀರ್ಣ ಶಕ್ತಿಯನ್ನು ಹೆಚ್ಚಿಸುತ್ತದೆ
ಪಾನಿ ಪುರಿ ತಿನ್ನುವುದರಿಂದ ಸಿಗುವ ಮತ್ತೊಂದು ಪ್ರಯೋಜನವೆಂದರೆ ಪಾನಿ ಪುರಿ ನೀರು ಹೊಟ್ಟೆಯಲ್ಲಿನ ಅನಿಲ ಮತ್ತು ಅಜೀರ್ಣವನ್ನು ನಿವಾರಿಸಲು ಸಹಾಯ ಮಾಡುತ್ತದೆ. ಮಾತ್ರವಲ್ಲ ಈ ನೀರು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಜೊತೆಗೆ ಪದೇ ಪದೇ ಉಬ್ಬರದಿಂದ ಕಂಡುಬರುವ ಹೊಟ್ಟೆ ನೋವನ್ನು ಶಮನಗೊಳಿಸಲು ಸಹಕಾರಿಯಾಗಿದೆ. ಅಲ್ಲದೆ ಈ ನೀರಿನಲ್ಲಿರುವ ಉತ್ಕರ್ಷಣ ನಿರೋಧಕಗಳು ಮತ್ತು ಜೀವಸತ್ವಗಳು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ಜೊತೆಗೆ ದೇಹವು ರೋಗಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತವೆ.
ಬಾಯಿಯ ದುರ್ವಾಸನೆಗೆ ಮುಕ್ತಿ ನೀಡುತ್ತದೆ
ಪುದೀನಾ ಮತ್ತು ಕೊತ್ತಂಬರಿ ಸೊಪ್ಪಿನಲ್ಲಿರುವ ಬ್ಯಾಕ್ಟೀರಿಯಾ ವಿರೋಧಿ ಗುಣಗಳು ಬಾಯಿಯಲ್ಲಿರುವ ಬ್ಯಾಕ್ಟೀರಿಯಾಗಳನ್ನು ಕೊಲ್ಲುತ್ತವೆ. ಇದು ಬಾಯಿಯ ದುರ್ವಾಸನೆಯನ್ನು ನಿವಾರಿಸಿ ಬಾಯಿ ತಾಜಾತನದಿಂದ ಇರುವಂತೆ ನೋಡಿಕೊಳ್ಳುತ್ತದೆ. ಇನ್ನು ಈ ಪಾನಿ ಪುರಿಯ ಸಿಹಿ ಮತ್ತು ಕಟುವಾದ ರುಚಿಯನ್ನು ಹೊಂದಿದ್ದು ಇದನ್ನು ಸೇವನೆ ಮಾಡಿದಾಗ ಮೆದುಳಿನಲ್ಲಿ ಆನಂದವನ್ನು ಉಂಟುಮಾಡುವ ಹಾರ್ಮೋನುಗಳು ಬಿಡುಗಡೆಯಾಗುತ್ತದೆ, ಇದರಿಂದ ಒತ್ತಡ ಕಡಿಮೆಯಾಗುತ್ತದೆ.
ಮಹಿಳೆಯ ಶವವನ್ನೂ ಬಿಡದ ವಿಕೃತಕಾಮಿ! ಮಹಿಳೆಯ ಮೃತದೇಹದ ಮೇಲೆ ಲೈಂಗಿಕ ದೌರ್ಜನ್ಯ