Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ಬೆಂಗಳೂರು: ನಾನು ಸಿಎಂ ಹುದ್ದೆ ಅಲಂಕರಿಸಲು ಆತುರದಲ್ಲಿ ಇಲ್ಲ. ನಾನು ಇಲ್ಲಿಗೆ ಬಂದಿರುವುದು ಸಾರ್ವಜನಿಕರ ಸೇವೆ ಮಾಡಲು. ರಾಜಕಾರಣ ಮಾಡಲು ಅಲ್ಲ. ಜನರ ಸೇವೆ ಮಾಡಲು ಹಗಲು ರಾತ್ರಿ ತಿರುಗುತ್ತಿದ್ದೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.
ನೀವು ಇದೇ ರೀತಿ ಸುದ್ದಿ ತಿರುಚುವುದಾದರೆ, ನಾನು ನಿಮಗೆ ಸಹಕಾರ ನೀಡುವುದಿಲ್ಲ. ಕಾರ್ಯಕ್ರಮಗಳಿಗೆ ಕರೆಯುವುದೂ ಇಲ್ಲ, ಮಾಧ್ಯಮಗೋಷ್ಠಿ ಕರೆಯುವುದೂ ಇಲ್ಲ ಎಂದು ತಿಳಿಸಿದರು.
ಲಾಲ್ ಬಾಗ್ ಉದ್ಯಾನದಲ್ಲಿ ಬೆಂಗಳೂರು ನಡಿಗೆ ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರೊಂದಿಗೆ ಸಂವಾದದ ಬಳಿಕ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ನಾನು ಸಾರ್ವಜನಿಕರ ಭೇಟಿಗೆ ಬಂದಾಗ ಕೆಲವರು ನೀವು ಮುಖ್ಯಮಂತ್ರಿ ಆಗಬೇಕು, ಆ ಸಮಯ ಹತ್ತಿರ ಬರುತ್ತಿದೆಯೇ ಎಂದು ಕೇಳಿದರು. ಆದರೆ ಸಿಎಂ ಆಗುವ ಕಾಲ ಹತ್ತಿರ ಬರುತ್ತಿದೆ ಎಂದು ನಾನೇ ಹೇಳಿದ್ದೇನೆ ಎಂದು ಕೆಲವು ಮಾಧ್ಯಮಗಳು ಸುದ್ದಿ ತಿದ್ದಿ ಪ್ರಸಾರ ಮಾಡುತ್ತಿವೆ. ನೀವು ಹಾಗೆಲ್ಲ ಸುದ್ದಿ ತಿರುಚಿ ತೋರಿಸಬೇಡಿ ಎಂದು ತಿಳಿಸಿದರು.
ನಾನು ಸಿಎಂ ಹುದ್ದೆ ಅಲಂಕರಿಸಲು ಆತುರದಲ್ಲಿ ಇಲ್ಲ. ನಾನು ಇಲ್ಲಿಗೆ ಬಂದಿರುವುದು ಸಾರ್ವಜನಿಕರ ಸೇವೆ ಮಾಡಲು. ರಾಜಕಾರಣ ಮಾಡಲು ಅಲ್ಲ. ಜನರ ಸೇವೆ ಮಾಡಲು ಹಗಲು ರಾತ್ರಿ ತಿರುಗುತ್ತಿದ್ದೇನೆ. ನೀವು ಇದೇ ರೀತಿ ಸುದ್ದಿ ತಿರುಚುವುದಾದರೆ, ನಾನು ನಿಮಗೆ ಸಹಕಾರ ನೀಡುವುದಿಲ್ಲ. ಕಾರ್ಯಕ್ರಮಗಳಿಗೆ ಕರೆಯುವುದೂ ಇಲ್ಲ, ಮಾಧ್ಯಮಗೋಷ್ಠಿ ಕರೆಯುವುದೂ ಇಲ್ಲ ಎಂದು ತಿಳಿಸಿದರು.