13 ನೇ‌ ಮಹಡಿಯಿಂದ ಬಿದ್ದು ಇಬ್ಬರು ಕಾರ್ಮಿಕರ ಸಾವು

newsics.com ಬೆಂಗಳೂರು: ನಿರ್ಮಾಣ ಹಂತದ ಅಪಾರ್ಟ್‌ಮೆಂಟ್ ಕಟ್ಟಡದ 13ನೇ ಮಹಡಿಯಿಂದ ಬಿದ್ದು ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ನಗರದಲ್ಲಿ ನಡೆದಿದೆ. ಶುಕ್ರವಾರ ಮಧ್ಯಾಹ್ನ ಬೆಳ್ಳಂದೂರು ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪಶ್ಚಿಮ ಬಂಗಾಳದ ಸೋನ್‌ಪುರ್ ಮೂಲದ ಅಮೀರ್ ಹುಸೇನ್ (33) ಹಾಗೂ ಮುಮ್ತಾಜ್ ಅಲಿ (28) ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ. ಖಾಸಗಿ ಕಂಪನಿಯೊಂದರ ಅಪಾರ್ಟ್‌ಮೆಂಟ್ ಕಟ್ಟಡ ನಿರ್ಮಾಣ ಕೆಲಸವನ್ನು ಇಂಪೀರಿಯಲ್ ಬಿಲ್ಡ್ ಟೆಕ್ ಪ್ರೈವೇಟ್ ಲಿಮಿಟೆಡ್‌ಗೆ ಗುತ್ತಿಗೆಗೆ ವಹಿಸಲಾಗಿತ್ತು. ಶುಕ್ರವಾರ ಮಧ್ಯಾಹ್ನ ಕಟ್ಟಡದ ಹದಿಮೂರನೇ ಮಹಡಿಯ … Continue reading 13 ನೇ‌ ಮಹಡಿಯಿಂದ ಬಿದ್ದು ಇಬ್ಬರು ಕಾರ್ಮಿಕರ ಸಾವು