Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ಚಿಕ್ಕಬಳ್ಳಾಪುರ: ಕೇವಲ 3 ತಿಂಗಳಿನ ಹಿಂದೆ ತನ್ನ ತಂದೆಯನ್ನು ಕಳೆದುಕೊಂಡ ಮಗಳು ಮನನೊಂದು ತಾನೂ ಸಹ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ವಿದ್ಯಾಭಾಸ ನಡೆಸುತ್ತಿದ್ದ ಸ್ವರ್ಣ(22) ತಂದೆಯ ಸಾವಿನಿಂದ ಮಾನಸಿಕವಾಗಿ ಕುಗ್ಗಿ, ಇಲಿ ಪಾಷಾಣ ಸೇವಿಸಿದ್ದಳು. ವಿಷಯ ತಿಳಿದ ತಾಯಿ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸ್ವರ್ಣ ಸಾವನ್ನಪ್ಪಿದ್ದಾಳೆ.
ಜಿಲ್ಲೆಯ ಗೌರಿಬಿದನೂರು ನಗರದ ನಾಗಿರೆಡ್ಡಿ ಬಡಾವಣೆಯ 22 ವರ್ಷದ ಸ್ವರ್ಣ ಆತ್ಮಹತ್ಯೆಗೆ ಶರಣಾದ ದುರ್ದೈವಿ. ಇವಳು ಬೆಂಗಳೂರಿನ ಮಹಾರಾಣಿ ಕಾಲೇಜಿನಲ್ಲಿ ಎಂಎಸ್ಸಿ ಪದವಿ ವ್ಯಾಸಂಗ ಮಾಡುತ್ತಿದ್ದಳು. ಮೂರು ತಿಂಗಳ ಹಿಂದೆಯಷ್ಟೇ ಸ್ವರ್ಣಳ ತಂದೆ ಗಂಗಾಧರ್ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದರು. ತಂದೆಯ ಸಾವಿನಿಂದ ಸ್ವರ್ಣ ಮಾನಸಿಕವಾಗಿ ಕುಗ್ಗಿದ್ದಳು. ಬದುಕುವ ಧೈರ್ಯ ಕಳೆದುಕೊಂಡಿದ್ದಳು. ಮನನೊಂದ ಸ್ವರ್ಣ ಕಾಲೇಜಿನ ಹಾಸ್ಟೆಲ್ ನಲ್ಲಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ನಂತರ ಮನೆಗೆ ಬಂದಿದ್ದ ಸ್ವರ್ಣಳನ್ನು ಆಕೆಯ ತಾಯಿ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮಗಳು ಸ್ವರ್ಣ ನಿನ್ನೆ (ಅ.11) ತಡರಾತ್ರಿ ಸಾವನ್ನಪ್ಪಿದ್ದಾಳೆ.