Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > RSS ನಿಷೇಧಕ್ಕೆ ಒತ್ತಾಯಿಸಿ ಸಿಎಂಗೆ ಸಚಿವ ಖರ್ಗೆ ಬರೆದ ಪತ್ರ ವೈರಲ್, ಬ್ಯಾನ್ ಆಗತ್ತಾ ಆರೆಸ್ಸೆಸ್? ಸಿಎಂ ಹೇಳಿದ್ದೇನು?
ಕರ್ನಾಟಕದೇಶಪ್ರಮುಖವೈರಲ್

RSS ನಿಷೇಧಕ್ಕೆ ಒತ್ತಾಯಿಸಿ ಸಿಎಂಗೆ ಸಚಿವ ಖರ್ಗೆ ಬರೆದ ಪತ್ರ ವೈರಲ್, ಬ್ಯಾನ್ ಆಗತ್ತಾ ಆರೆಸ್ಸೆಸ್? ಸಿಎಂ ಹೇಳಿದ್ದೇನು?

Share
2 Min Read
SHARE

newsics.com

ಕರ್ನಾಟಕದಲ್ಲಿ ಆರೆಸ್ಸೆಸ್ ಸಂಘಟನೆಯ ಚಟುವಟಿಕೆಯನ್ನು ನಿಷೇಧಿಸುವ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದರು.

ಈ ಪತ್ರವನ್ನು ಪರಿಶೀಲಿಸಿ ಕೂಡಲೇ ಅಗತ್ಯ ಕ್ರಮ ವಹಿಸುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಹೀಗಾಗಿ ಕರ್ನಾಟಕದಲ್ಲಿ ಆರ್ ಎಸ್ ಎಸ್ ಸಂಘಟನೆ ನಿಷೇಧದ ಹೇರಲಿದ್ಯಾ ಎಂಬ ಅನುಮಾನಕ್ಕೆ ಎಡೆಮಾಡಿಕೊಟ್ಟಂತೆ ಆಗಿದೆ.

ರಾಜ್ಯದಲ್ಲಿ ಆರ್ ಎಸ್ ಎಸ್ ಸಂಘಟನೆಯ ಚಟುವಟಿಕೆಯನ್ನು ನಿಷೇಧಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು.

ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ದರಾಮಯ್ಯಗೆ ಬರೆದಿರುವ ಪತ್ರದಲ್ಲಿ ಜನ ಸಮುದಾಯದಲ್ಲಿ ದ್ವೇಷ ಬಿತ್ತುವ ವಿಭಜಕ ಶಕ್ತಿಗಳು ತಲೆ ಎತ್ತಿದಾಗ ಅವುಗಳನ್ನು ನಿಗ್ರಹಿಸುವುಕ್ಕಾಗಿ ಹಾಗೂ ದೇಶದ ಜಾತ್ಯತೀತ ಮೌಲ್ಯಗಳನ್ನು ಎತ್ತಿ ಹಿಡಿಯುವುದಕ್ಕಾಗಿ ಸಮಗ್ರತೆ, ಸಮಾನತೆ ಮತ್ತು ಏಕತೆಯ ಮೂಲ ತತ್ತ್ವಗಳನ್ನೊಳಗೊಂಡ ಸಂವಿಧಾನವು ನಮಗೆ ಅಧಿಕಾರವನ್ನು ನೀಡಿರುತ್ತದೆ ಎಂದಿದ್ದಾರೆ.

ರಾಷ್ಟ್ರೀಯ ಸ್ವಯಂಸೇವಕ ಸಂಘ ಎಂಬ ಹೆಸರಿನ ಸಂಘಟನೆಯು ಸರ್ಕಾರಿ ಮತ್ತು ಅನುದಾನಿತ ಶಾಲೆಗಳು ಹಾಗೂ ಸಾರ್ವಜನಿಕ ಸರ್ಕಾರಿ ಮೈದಾನಗಳನ್ನು ಬಳಸಿಕೊಂಡು ಶಾಖೆಗಳನ್ನು ನಡೆಸುತ್ತಾ, ಘೋಷಣೆಗಳನ್ನು ಕೂಗುತ್ತಾ ಮಕ್ಕಳು ಮತ್ತು ಯುವ ಸಮುದಾಯದ ಮನಸ್ಸಿನಲ್ಲಿ ಭಾರತದ ಏಕತೆಯ ವಿರುದ್ಧವಾಗಿ, ಹಾಗೂ ಸಂವಿಧಾನದ ಆಶಯಗಳ ವಿರುದ್ಧವಾಗಿ ನಕಾರಾತ್ಮಕ ಆಲೋಚನೆಗಳನ್ನು ತುಂಬಲಾಗುತ್ತಿದೆ ಎಂದು ದೂರಿದ್ದಾರೆ.

ಪೊಲೀಸ್ ಅನುಮತಿ ಪಡೆಯದೆ ದೊಣ್ಣೆಗಳನ್ನು ಹಿಡಿದು ಆಕ್ರಮಣಕಾರಿ ಪುದರ್ಶನ ನಡೆಸುವ ಮೂಲಕ ಮುಗ್ಧ ಮಕ್ಕಳು ಹಾಗೂ ಯುವಜನರ ಮನಸಿನ ಮೇಲೆ ದುಷ್ಪರಿಣಾಮ ಬೀರಲಾಗುತ್ತಿದೆ ಎಂದಿದ್ದಾರೆ.

ನಾಡಿನ ಮಕ್ಕಳು, ಯುವ ಸಮುದಾಯ, ಸಾರ್ವಜನಿಕರು ಮತ್ತು ಸಮಾಜದ ಸ್ವಾಸ್ಥ್ಯದ ಹಿತದೃಷ್ಟಿಯಿಂದ ಸರ್ಕಾರಿ ಶಾಲೆಗಳು ಹಾಗೂ ಸರ್ಕಾರದ ಅನುದಾನಿತ ಶಾಲೆಗಳು ಮತ್ತು ಮೈದಾನಗಳು, ಉದ್ಯಾನವನಗಳು, ಮುಜರಾಯಿ ಇಲಾಖೆಯ ದೇವಸ್ಥಾನಗಳು, ಪುರಾತತ್ವ ಇಲಾಖೆಯ ಸ್ಥಳಗಳು ಸೇರಿದಂತೆ ಯಾವುದೇ ಸರ್ಕಾರಿ ಸ್ಥಳಗಳಲ್ಲಿ RSS ಸಂಘಟನೆಯು ಶಾಖೆ, ಸಾಂಘಿಕ್ ಅಥವಾ ಬೈಠಕ್ ಹೆಸರಲ್ಲಿ ನಡೆಸುವ ಎಲ್ಲಾ ಬಗೆಯ ಚಟುವಟಿಕೆಗಳಿಗೆ ನಿಷೇಧ ಹೇರಬೇಕು ಎಂದು ಪತ್ರದಲ್ಲಿ ಸಿಎಂ ಸಿದ್ಧರಾಮಯ್ಯ ಅವರಿಗೆ ಸಚಿವ ಪ್ರಿಯಾಂಕ್ ಖರ್ಗೆ ಮನವಿ ಮಾಡಿದ್ದಾರೆ.

ಈ ಮನವಿ ಪತ್ರದ ಮೇಲೆ ಸಿಎಂ ಸಿದ್ದರಾಮಯ್ಯ ಅವರು, ಪರಿಶೀಲಿಸಿ ಕೂಡಲೇ ಅಗತ್ಯ ಕ್ರಮ ಜರೂರಾಗಿ ಜರುಗಿಸುವುದು ಎಂಬುದಾಗಿ ತಿಳಿಸಿದ್ದಾರೆ. ಹೀಗಾಗಿ ಕರ್ನಾಟಕದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ( RSS) ಚಟುವಟಿಕೆಗಳನ್ನು ನಿಷೇಧಿಸುವ ಸಾಧ್ಯತೆ ಇದೆ.

ಕಸ ಎಸೆಯಬೇಡಿ ಎಂದ ವಿದೇಶಿ ಯುವತಿಗೆ ಕಾಟ ಕೊಟ್ಟು ಮೊಂಡಾಟ ಮೆರೆದ ಮಕ್ಕಳು! ವೈರಲ್ ವೀಡಿಯೊ ನೋಡಿ

ಪ್ರೀತಿಸಿದ ಯುವಕನಿಗಾಗಿ 3.4 ಕೋಟಿ ರೂ ಸಂಬಳದ ಉದ್ಯೋಗವನ್ನು ತೊರೆದ ಮಹಿಳೆ

ಬೀಚ್​ನಲ್ಲಿ ಹೆಲಿಕಾಪ್ಟರ್​ ಪತನ – ಹಲವರಿಗೆ ಗಾಯ; ವಿಡಿಯೋ ನೋಡಿ

TAGGED:Minister Kharge's letter to CM demanding RSS ban goes viralwhat did CM say? Will RSS be banned?
Share This Article
Facebook Twitter Copy Link Print
Previous Article ಪ್ರೀತಿಸಿದ ಯುವಕನಿಗಾಗಿ 3.4 ಕೋಟಿ ರೂ ಸಂಬಳದ ಉದ್ಯೋಗವನ್ನು ತೊರೆದ ಮಹಿಳೆ
Next Article ದೀಪೋತ್ಸವ: ಬೆಳಗಲಿವೆ ದಾಖಲೆಯ 28 ಲಕ್ಷ ಹಣತೆ

Popular Posts

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

You Might Also Like

ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?