Subscribe NewsicsKannada/YouTube
newsics.com
ಇತ್ತೀಚಿನ ದಿನಗಳಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಪ್ರಭಾವಿ ವ್ಯಕ್ತಿಗಳು ಬ್ರೆಡ್ ಮತ್ತು ಚಪಾತಿ ತಿನ್ನುವುದರಿಂದ ಕ್ಯಾನ್ಸರ್ ಬರುತ್ತದೆ ಎಂದು ಹೇಳುತ್ತಿದ್ದಾರೆ.
ಇನ್ನೂ ಈ ಬಗ್ಗೆ ಮಾತನಾಡಿರುವ ಕ್ಯಾನ್ಸರ್ ಶಸ್ತ್ರಚಿಕಿತ್ಸಕ ಡಾ. ಜಯೇಶ್ ಕುಮಾರ್ ಅವರು, ಬ್ರೆಡ್ ನಿಂದ ಕ್ಯಾನ್ಸರ್ ಬರುವುದಕ್ಕೆ ಎರಡು ಪ್ರಮುಖ ಕಾರಣಗಳಿವೆ. ಅದರಲ್ಲಿ ಮೊದಲನೇಯದು ಇದು ಅಕ್ರಿಲಾಮೈಡ್ ಅನ್ನು ಉತ್ಪಾದಿಸುತ್ತದೆ. ಪ್ರಾಣಿಗಳಲ್ಲಿ ಅಕ್ರಿಲಾಮೈಡ್ ಅಧಿಕ ಪ್ರಮಾಣದಲ್ಲಿರುವುದರಿಂದ ಉಂಟಾಗುತ್ತದೆ ಎಂದು ತಿಳಿಸಲಾಗಿದೆ.
ಆದರೆ, ಇದು ಮನುಷ್ಯರಲ್ಲಿ ಕಂಡು ಬರುತ್ತದೆ ಎಂಬುವುದಕ್ಕೆ ಯಾವುದೇ ಪುರಾವೆಗಳಿಲ್ಲ. ಇಂತಹ ಪರಿಸ್ಥಿತಿಯಲ್ಲಿ, ಇದನ್ನು ಸ್ವಲ್ಪ ಪ್ರಮಾಣದಲ್ಲಿ ಸೇವಿಸುವುದು ಅಥವಾ ಸಮತೋಲಿತ ರೀತಿಯಲ್ಲಿ ಆಹಾರದಲ್ಲಿ ಸೇವಿಸುವುದು ಉತ್ತಮ. ಯಾವುದೇ ಪದಾರ್ಥವೇ ಆಗಿರಲಿ ಅತಿಯಾಗಿ ಸೇವಿಸುವುದು ಆರೋಗ್ಯಕ್ಕೆ ಹಾನಿಕಾರಕವಾಗಿದೆ.
ಬ್ರೆಡ್‌ನಲ್ಲಿ ಉತ್ಪತ್ತಿಯಾಗುವ ಅಕ್ರಿಲಾಮೈಡ್ ಪ್ರಮಾಣವು ದೀರ್ಘಾವಧಿಯಲ್ಲಿ ಮಾನವರಲ್ಲಿ ಕ್ಯಾನ್ಸರ್‌ಗೆ ಕಾರಣವಾಗುತ್ತದೆ ಎಂದು ಹೇಳುವುದಕ್ಕೆ ಇನ್ನೂ ಯಾವುದೇ ಪುರಾವೆಗಳಿಲ್ಲ ಎಂದು ಡಾ. ಜಯೇಶ್ ಹೇಳುತ್ತಾರೆ.