newsics.com
ರಾಜ್ಯ ಕಾಂಗ್ರೆಸ್‌ನಲ್ಲಿ ಮತ್ತೊಮ್ಮೆ ಮುಖ್ಯಮಂತ್ರಿ ಬದಲಾವಣೆಯ ಚರ್ಚೆ ಜೋರಾಗಿದೆ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಪವರ್ ಶೇರಿಂಗ್ ಸದ್ದು ಮಾಡುತ್ತಲೇ ಇದೆ. ಆದರೆ, ಎರಡು ವರ್ಷವಾದ್ರೂ ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಯಾವುದೇ ನಿರ್ಧಾರ ಕೈಗೊಂಡಿಲ್ಲ.
ಗೊಂದಲಕ್ಕೆ ತೆರೆ ಎಳೆಯಬೇಕಾದ ಕಾಂಗ್ರೆಸ್‌ನ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ನ ಖರ್ಗೆಯವರೇ ಈ ಕುರಿತು ಮೌನಕ್ಕೆ ಶರಣಾಗಿದ್ದಾರೆ.
ನವೆಂಬರ್ ನಲ್ಲಿ ಮುಖ್ಯಮಂತ್ರಿ ಬದಲಾವಣೆ, ಸಚಿವ ಸಂಪುಟ ಪುನರ್‌ರಚನೆ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನೂತನ ಸಾರಥಿಯ ಆಯ್ಕೆ ಎಂಬ ಸಾಲು ಸಾಲು ಚರ್ಚೆಗಳು ಮಾತ್ರ ನಡೆಯುತ್ತಿದ್ದು, ನವೆಂಬರ್‌ನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ಉಪಮುಖ್ಯಮಂತ್ರಿಯಾಗುತ್ತಾರೆ ಎಂಬ ಮಾತೂ ಕಾಂಗ್ರೆಸ್ ಪಾಳಯದಲ್ಲಿ ಕೇಳಿಬರುತ್ತಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವಿನ ‘ಕೋಲ್ಡ್ ವಾರ್’ ಮತ್ತಷ್ಟು ತೀವ್ರಗೊಂಡಿರುವಾಗಲೇ ಪ್ರಿಯಾಂಕ್ ಖರ್ಗೆ ಅವರು ಉಪಮುಖ್ಯಮಂತ್ರಿ ಸ್ಥಾನ ನೀಡುವ ಕುರಿತು ರಾಜ್ಯ ಕಾಂಗ್ರೆಸ್‌ನಲ್ಲಿ ಹೊಸ ಸಂಚಲನವನ್ನೇ ಸೃಷ್ಟಿಸಿದೆ.
ನವೆಂಬರ್‌ನಲ್ಲಿ ಸರ್ಕಾರ ರಚನೆಯಾಗಿ ಭರ್ತಿ ಎರಡೂವರೆ ವರ್ಷ ತುಂಬಲಿದೆ, ಅಲಿಖಿತ ಒಪ್ಪಂದದಂತೆ ಸಿದ್ದರಾಮಯ್ಯ ಕುರ್ಚಿ ಬಿಟ್ಟು ಕೊಡಬೇಕು. ಡಿಕೆ ಶಿವಕುಮಾರ್ ಸಿಎಂ ಆಗಬೇಕು. ಅದರೆ ಚರ್ಚೆ ಮಾತ್ರ ಮುಂದುವರಿದಿದೆ.
ನವೆಂಬರ್‌ಗೆ ಸಚಿವ ಸಂಪುಟ ಪುನರ್‌ರಚನೆ ಕುರಿತು ಹೈಕಮಾಂಡ್ ಈಗಾಗಲೇ ಗ್ರೀನ್ ಸಿಗ್ನಿಲ್ ನೀಡಿದೆ ಎಂದು ಕಾಂಗ್ರೆಸ್‌ನ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಕುರ್ಚಿ ಭದ್ರಪಡಿಸಿಕೊಳ್ಳಲು ಸರ್ವಪ್ರಯತ್ನ ನಡೆಸುತ್ತಿದ್ದರೆ, ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಗಾದಿಗೇರಲು ತಮ್ಮದೇ ಆದ ದಾಳಗಳನ್ನು ಉರುಳಿಸುತ್ತಿದ್ದಾರೆ. ಈ ನಡುವೆ, ಪ್ರಿಯಾಂಕ್ ಖರ್ಗೆ ಅವರಿಗೆ ಡಿಸಿಎಂ ಸ್ಥಾನ ನೀಡುವ ಕುರಿತು ಹೈಕಮಾಂಡ್ ಮಟ್ಟದಲ್ಲಿ ಚರ್ಚೆಯಾಗಿದೆ ಎನ್ನಲಾಗಿದೆ.
ನವೆಂಬರ್‌ನಲ್ಲಿ ಸಚಿವ ಸಂಪುಟ ಪುನರ್‌ರಚನೆಯಾಗಲಿದೆ. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದ 15 ಸಚಿವರಿಗೆ ಕೊಕ್ ಕೊಟ್ಟು ಹೊಸಬರಿಗೆ ಹಾಗೂ ಹಿರಿಯ ಶಾಸಕರಿಗೆ ಮಂತ್ರಿ ಸ್ಥಾನವನ್ನ ನೀಡಬೇಕು ಎಂದು ಹೈಕಮಾಂಡ್ ಲೆಕ್ಕಾಚಾರ ಹಾಕಿಕೊಂಡಿದೆ.
actor Raju Talikote is no more ಹಿರಿಯ ರಂಗ ಕಲಾವಿದ, ನಟ ರಾಜು ತಾಳಿಕೋಟೆ ಇನ್ನಿಲ್ಲ
ಕಾಂಗ್ರೆಸ್ ಶಾಸಕರ ಶಾಲೆಯಲ್ಲೇ ಆರೆಸ್ಸೆಸ್ ಶಾಖೆ, ಬೈಠಕ್: ನಗೆಪಾಟಲಿಗೀಡಾದ ಪ್ರಿಯಾಂಕ್ ಖರ್ಗೆ RSS ಬ್ಯಾನ್ ಪತ್ರ!
ರಾಜ್ಯದಲ್ಲೂ ಆರೆಸ್ಸೆಸ್ ಚಟುವಟಿಕೆಗೆ ನಿರ್ಬಂಧ ಬಹುತೇಕ ಖಚಿತ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?