newsics.com
ಉಡುಪಿ: ನಾನೀಗ ಭಾರವಾದ ಹೃದಯದಿಂದ ಬ್ಯಾಡ್ಮಿಂಟನ್ ಆಟ ತೊರೆದಿದ್ದೇನೆ. ದೈಹಿಕ ಕ್ಷಮತೆಯ ಕಾರಣಕ್ಕೆ ಇದು ಅನಿವಾರ್ಯವಾಗಿತ್ತು. ಆಟವಾಡುವ ಉತ್ಸಾಹ ಇದ್ದರೂ, ದೇಹ ಸ್ಪಂದಿಸುವುದಿಲ್ಲ ಎಂದು ಬ್ಯಾಡ್ಮಿಂಟನ್ ಸ್ಟಾರ್, ಪದ್ಮಭೂಷಣ ಸೈನಾ ನೆಹ್ವಾಲ್ ಹೇಳಿದ್ದಾರೆ.
ಮಣಿಪಾಲದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೋಚಿಂಗ್ ನೀಡುವ ಬಗ್ಗೆ ನನಗೆ ಆಸಕ್ತಿ ಇಲ್ಲ. ಹೈದರಾಬಾದ್ನಲ್ಲಿ ಬ್ಯಾಡ್ಮಿಂಟನ್ ತರಬೇತಿ ನೀಡುವ ಅತ್ಯುತ್ತಮ ಅಕಾಡೆಮಿಗಳಿವೆ. ನನ್ನ ಪತಿ ಕೂಡ ಗೋಪಿ ಸರ್ಗೆ ( ಪುಲ್ಲೇಲ ಗೋಪಿಚಂದ್) ಈಗ ಸಹಾಯ ಮಾಡುತ್ತಿದ್ದಾರೆ. ಕೋಚಿಂಗ್ ತುಂಬಾ ಡಿಫಿಕಲ್ಟ್. ಆಡುವುದಕ್ಕಿಂತಲೂ ಕೋಚಿಂಗ್ಗೆ ಹೆಚ್ಚಿನ ಪರಿಶ್ರಮ ಹಾಕಬೇಕಾಗುತ್ತದೆ. ಹತ್ತು ಹದಿನೈದು ಗಂಟೆ ನಿಂತುಕೊಂಡು ತರಬೇತಿ ನೀಡುವುದು ಸುಲಭವಲ್ಲ. ಕ್ರೀಡೆಯಲ್ಲಿ ತೊಡಗಿಸಿಕೊಳ್ಳಲು ಮಕ್ಕಳಿಗೆ ಪ್ರೇರಣೆ ನೀಡುವ ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿದರು.
ಧರ್ಮಸ್ಥಳ ವಿರುದ್ಧ ಮಾನಹಾನಿಕರ ವೀಡಿಯೋ ಡಿಲೀಟ್ ಮಾಡಲು ಯ್ಯೂಟೂಬರ್‌ಗಳಿಗೆ 3 ದಿನ ಗಡುವು!