Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭ ಪ್ರಯಾಣಿಕರ ದಟ್ಟಣೆ ನಿರ್ವಹಣೆ ಸಲುವಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಬೆಂಗಳೂರಿನಿಂದ ವಿವಿಧ ಊರುಗಳಿಗೆ 2,500 ಹೆಚ್ಚುವರಿ ಬಸ್ಗಳನ್ನು ಘೋಷಿಸಿದೆ.
ಈ ಹೆಚ್ಚುವರಿ ಬಸ್ ಟ್ರಿಪ್ಗಳು ಅಕ್ಟೋಬರ್ 17 ರಿಂದ 20 ರವರೆಗೆ ಇರಲಿದ್ದು, ಅಕ್ಟೋಬರ್ 22 ರಿಂದ 26 ರವರೆಗೆ ಹಿಂತಿರುಗುವ ಪ್ರಯಾಣವನ್ನು ನಿಗದಿಪಡಿಸಲಾಗಿದೆ. ಪ್ರಯಾಣಿಕರು ಕೆಎಸ್ಆರ್ಟಿಸಿ ರಿಸರ್ವೇಷನ್ ಕೌಂಟರ್ಗಳಲ್ಲಿ ಅಥವಾ www.ksrtc.karnataka.gov.in ಮೂಲಕ ಆನ್ಲೈನ್ನಲ್ಲಿ ಟಿಕೆಟ್ಗಳನ್ನು ಬುಕ್ ಮಾಡಬಹುದಾಗಿದೆ ಎಂದು ನಿಗಮ ತಿಳಿಸಿದೆ.
ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಸಾರಿಗೆ ಇಲಾಖೆ ಗುಡ್ ನ್ಯೂಸ್ ನೀಡಿದೆ. ಹಬ್ಬದ ಪ್ರಯುಕ್ತ 250 ಕೆಎಸ್ ಆರ್ ಟಿಸಿ ಬಸ್ ಗಳ ವ್ಯವಸ್ಥೆ ಮಾಡಿದೆ. ಹಬ್ಬದ ಹಿನ್ನೆಲೆ ಅ.17ರಿಂದ 20ರವರೆಗೆ KSRTC ವತಿಯಿಂದ 2,500 ಹೆಚ್ಚುವರಿ ಬಸ್ ಗಳ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ.ಕೆಎಸ್ಆರ್ಟಿಸಿ ಸಾಮಾನ್ಯ ಸಾರಿಗೆ, ಐರಾವತ, ಸ್ಲೀಪರ್ ಕೋಚ್ ಸೇರಿ ಎಲ್ಲಾ ಐಷಾರಾಮಿ ಬಸ್ಗಳ ಸೇವೆ ಲಭ್ಯವಿರುತ್ತವೆ.