Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ಹಾಸನಾಂಬೆ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದು, ಪ್ರಾರ್ಥನೆ ವೇಳೆ ಹಾಸನಾಂಬೆ ಹೂ ಮೂಲಕ ವರ ನೀಡಿದೆ. ಡಿಸಿಎಂ ಡಿಕೆಶಿ ಪ್ರಾರ್ಥನೆ ಸಲ್ಲಿಸುವಾಗ ಹೂ ಎರಡು ಬಾರಿ ಬಲಕ್ಕೆ ಬಿದ್ದಿದೆ.
ಹಾಸನಾಂಬೆ ದೇವಾಲಯದಲ್ಲಿ ಡಿಕೆ ಶಿವಕುಮಾರ್ ಶತ್ರುಗಳ ಮೇಲೆ ವಿಜಯದ ಸಂಕೇತವಾಗಿ ವಿಶೇಷ ಪೂಜೆ ಮಾಡಿದ್ದಾರೆ. 5 ನಿಮಿಷಗಳ ಕಾಲ ಶಕ್ತಿಯುತವಾದ ಖಡ್ಗಮಾಲಾ ಸ್ತೋತ್ರ ಪಠಿಸಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ವೇಳೆ ಪ್ರಸಾದ ಬಹಳ ಚೆನ್ನಾಗಿ ಆಗಿದೆ.
ಈ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದು, ಓಂ ಹಾಸನಪುರ ನಿಲಯೇ ದೇವಿ, ಶಕ್ತಿಸ್ವರೂಪಿಣಿ। ಕಾರುಣ್ಯಮಯಿ ಜಗದಂಬೆ, ಪಾಹಿ ಮಾಂ ಶರಣಾಗತಂ॥ ಹಾಸನದ ಅಧಿದೇವತೆ ಶ್ರೀ ಹಾಸನಾಂಬ ದೇವಸ್ಥಾನಕ್ಕೆ ಭೇಟಿ ನೀಡಿದ ದೃಶ್ಯಗಳು ಎಂದು ದೇವಾಲಯದ ವೀಡಿಯೋ ಹಂಚಿಕೊಂಡಿದ್ದಾರೆ.