Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ಮುಂಬರುವ ವಾರದಲ್ಲಿ ಕರ್ನಾಟಕ ಸೇರಿದಂತೆ ದಕ್ಷಿಣ ರಾಜ್ಯಗಳಲ್ಲಿ ವ್ಯಾಪಕ ಮಳೆ ಮತ್ತು ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಕ್ಟೋಬರ್ 18 ರವರೆಗೆ ಹಲವಾರು ಪ್ರದೇಶಗಳಲ್ಲಿ ಲಘುದಿಂದ ಮಧ್ಯಮ ಮಳೆಯಾಗಲಿದ್ದು, ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಅದಕ್ಷಿಣ ಕನ್ನಡ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಜಿಲ್ಲೆಗಳಿಗೆ ಭಾರೀ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಲ್ಲೂ ಸಹ ವರುಣ ಆರ್ಭಟಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ರಾಜ್ಯದಲ್ಲಿ ಮಳೆಯಾರ್ಭಟ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಗುಡುಗು, ಮಿಂಚು ಸಹಿತ ಮಳೆಯ ಎಚ್ಚರಿಕೆ ನೀಡಿದೆ.