Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ಬೆಂಗಳೂರು : ನನಗೆ ಬೆದರಿಕೆ ಕರೆ ಬರುತ್ತಿದೆ ಎಂದು ಆರೋಪಿಸಿದ್ದ ಸಚಿವ ಸಚಿವ ಪ್ರಿಯಾಂಕ್ ಖರ್ಗೆ ಇದೀಗ ಬೆದರಿಕೆ ಕರೆಯ ವಿಡಿಯೋ ರಿಲೀಸ್ ಮಾಡಿದ್ದಾರೆ.
ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಸಚಿವ ಪ್ರಿಯಾಂಕ್ ಖರ್ಗೆ RSS ಯುವಕರ, ಮಕ್ಕಳ ಮನಸುಗಳಲ್ಲಿ ಕಲ್ಮಶ ತುಂಬುವ ಕೆಲಸ ಮಾಡುತ್ತಿದೆ ಎಂದಿದ್ದೆ, ಅವರು ತುಂಬಿದ ಕಲ್ಮಶವು ಹೇಗಿರುತ್ತದೆ ಎಂಬುದಕ್ಕೆ ಸಣ್ಣ ಉದಾಹರಣೆ ಇಲ್ಲಿದೆ.
ಕೆಲವು ದಿನಗಳಿಂದ ನನಗೆ ನಿರಂತರವಾಗಿ ಬರುತ್ತಿದ್ದ ಬೆದರಿಕೆ ಮತ್ತು ನಿಂದನೆಯ ಕರೆಗಳಲ್ಲಿ ಇದೊಂದು ಸ್ಯಾಂಪಲ್ ಅಷ್ಟೇ. ತಾಯಿ, ಸಹೋದರಿಯರ ಹೆಸರು ಹಿಡಿದು ಅತ್ಯಂತ ತುಚ್ಚವಾಗಿ ನಿಂದಿಸುವುದೇ ಶಾಖೆಗಳಲ್ಲಿ ನೀಡುವ ಸಂಸ್ಕಾರವೇ? ಮೋದಿ ಹಾಗೂ ಮೋಹನ್ ಭಾಗವತ್ ಅವರ ತಾಯಿಯಂದಿರಿಗೆ ಇದೇ ಬಗೆಯಲ್ಲಿ ನಿಂದಿಸುವುದನ್ನು ಮುಂತಾದ ಬಿಜೆಪಿ ನಾಯಕರು ಒಪ್ಪುತ್ತಾರೆಯೇ?
ಬಿಜೆಪಿ ನಾಯಕರ ಮಕ್ಕಳು ತಮ್ಮ ಭವ್ಯ ಭವಿಷ್ಯ ರೂಪಿಸಿಕೊಳ್ಳುತ್ತಿದ್ದಾರೆ, ಬಡವರ ಮಕ್ಕಳನ್ನು ಹೀಗೆ ನಿಂದಿಸುವುದಕ್ಕೆ, ಬೆದರಿಸುವುದಕ್ಕೆ ಮತ್ತು ಬಲಿಯಾಗುವುದಕ್ಕೆ ಬಳಸಿಕೊಳ್ಳುತ್ತಿದ್ದಾರೆ. ನಾನು ದೂರು ನೀಡಿದರೆ ಆ ವ್ಯಕ್ತಿಯ ಬದುಕಿನಲ್ಲಿ ಹಾನಿಯಾಗುತ್ತದೆಯೇ ಹೊರತು ಆತನನ್ನು ಇಂತಹ ಮನಸ್ಥಿತಿಗೆ ತಳ್ಳಿದವರಿಗೆ ಯಾವ ಹಾನಿಯೂ ಆಗುವುದಿಲ್ಲ ಎಂದಿದ್ದಾರೆ.