Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ಬೆಂಗಳೂರು: ಹಾಡಹಗಲೇ ವಿದ್ಯಾರ್ಥಿನಿಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶ್ರೀರಾಂಪುರದಲ್ಲಿ ನಡೆದಿದೆ.
ಶ್ರೀರಾಂಪುರ ರೈಲ್ವೆ ಟ್ರಾಕ್ ಬಳಿ ವಿದ್ಯಾರ್ಥಿನಿಯೊಬ್ಬಳನ್ನು ಕತ್ತು ಸೀಳಿ ಹತ್ಯೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ವಿದ್ಯಾರ್ಥಿನಿಯನ್ನು ಬೈಕ್ ನಲ್ಲಿ ಕರೆದುಕೊಂಡು ಬಂದು ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಶ್ರೀರಾಂಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿದ್ಯಾರ್ಥಿನಿ ಯಾರು? ಕೊಲೆಗೆ ಕಾರಣವೇನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ.