Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Dinesh ammannaya ಹಿರಿಯ ಯಕ್ಷಗಾನ ಭಾಗವತ, ರಸರಾಗ ಚಕ್ರವರ್ತಿ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ, ವೀಡಿಯೊ ನೋಡಿ
ಕರ್ನಾಟಕಪ್ರಮುಖಮನರಂಜನೆ

Dinesh ammannaya ಹಿರಿಯ ಯಕ್ಷಗಾನ ಭಾಗವತ, ರಸರಾಗ ಚಕ್ರವರ್ತಿ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ, ವೀಡಿಯೊ ನೋಡಿ

Share
1 Min Read
SHARE

Subscribe NewsicsKannada/YouTube

newsics.com

ಮಂಗಳೂರು: ತೆಂಕುತಿಟ್ಟು ಪರಂಪರೆಯ ಖ್ಯಾತ ಯಕ್ಷಗಾನ ಭಾಗವತ, ‘ರಸರಾಗ ಚಕ್ರವರ್ತಿ’ ದಿನೇಶ್ ಅಮ್ಮಣ್ಣಾಯ ಅವರು ಗುರುವಾರ ನಿಧನರಾದರು.

ಬೆಳ್ತಂಗಡಿಯ ಕನ್ಯಾಡಿಯಲ್ಲಿ ವಾಸವಿದ್ದ ಅವರಿಗೆ 68 ವರ್ಷ ವಯಸ್ಸಾಗಿತ್ತು. ತಮ್ಮ ಕಂಚಿನ ಕಂಠ ಹಾಗೂ ವಿಶಿಷ್ಟ ರಾಗ ಸಂಯೋಜನೆಯ ಮೂಲಕ ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಕಲಾ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು.

ಪೌರಾಣಿಕ ಮತ್ತು ತುಳು ಪ್ರಸಂಗಗಳೆರಡರಲ್ಲೂ ತಮ್ಮ ಛಾಪು ಮೂಡಿಸಿದ್ದ ಅಮ್ಮಣ್ಣಾಯ ಅವರು, ಯಕ್ಷಗಾನ ಕ್ಷೇತ್ರದಲ್ಲಿ ಚಿರಪರಿಚಿತ ಹೆಸರು.

ಯಕ್ಷಗಾನ ಕ್ಷೇತ್ರದ ಹಿರಿಯ ಕಲಾವಿದ, ತೆಂಕುತಿಟ್ಟು ಪರಂಪರೆಯಲ್ಲಿ ತುಳು ಯಕ್ಷಗಾನವನ್ನು ಉತ್ತುಂಗಕ್ಕೇರಿಸಿದ್ದ ದಾಮೋದರ ಮಂಡೆಚ್ಚರ ಗರಡಿಯಲ್ಲಿ ದಿನೇಶ್ ಅಮ್ಮಣ್ಣಾಯ ಅವರು ಪಳಗಿ ಪ್ರಸಿದ್ಧರಾಗಿದ್ದರು.

ತಮ್ಮ ವೃತ್ತಿಜೀವನವನ್ನು ಪುತ್ತೂರು ಮೇಳದಲ್ಲಿ ಚಂಡೆ ಮತ್ತು ಮದ್ದಳೆ ವಾದಕರಾಗಿ ಆರಂಭಿಸಿ, ಹಿಮ್ಮೇಳ ವಾದನದ ಅನುಭವದೊಂದಿಗೆ ಭಾಗವತಿಕೆಯತ್ತ ಹೊರಳಿದ್ದರು.

ಭಾಗವತಿಕೆಯಲ್ಲಿ ತಮ್ಮದೇ ವಿಶಿಷ್ಟ ಶೈಲಿ ರೂಪಿಸಿಕೊಂಡು ಯಶಸ್ವಿಯಾಗಿ ಅಗ್ರ ಸ್ಥಾನಕ್ಕೇರಿದ್ದರು.

ಅಮ್ಮಣ್ಣಾಯ ಅವರು ಕೇವಲ ಪೌರಾಣಿಕ ಪ್ರಸಂಗಗಳಿಗಷ್ಟೇ ಸೀಮಿತರಾಗದೆ, ಅನೇಕ ತುಳು ಪ್ರಸಂಗಗಳಿಗೂ ಧ್ವನಿಯಾಗಿದ್ದರು. ‘ಕಾಡಮಲ್ಲಿಗೆ’, ‘ಕಚ್ಚೂರ ಮಾಲ್ದಿ’, ‘ಪಟ್ಟದ ಪದ್ಮಲೆ’ ಹಾಗೂ ‘ಮಾನಿಷಾದ’ದಂತಹ ಪ್ರಸಂಗಗಳನ್ನು ತಮ್ಮ ಗಾಯನದಿಂದ ಜನಪ್ರಿಯಗೊಳಿಸಿದ್ದರು. ‘ಸತ್ಯಹರಿಶ್ಚಂದ್ರ’ ಪ್ರಸಂಗದ ಹಾಡುಗಳಿಗೆ ಸಾಕಷ್ಟು ಅಭಿಮಾನಿಗಳೇ ಸೃಷ್ಟಿಯಾಗಿದ್ದಾರೆ.

ಅಮ್ಮಣ್ಣಾಯ ಅವರ ಅನುಪಮ ಕಲಾ ಸೇವೆಗೆ ಉಡುಪಿ ತುಳುಕೂಟವು ಪ್ರತಿಷ್ಠಿತ ‘ಸಾಮಗ ಪ್ರಶಸ್ತಿ’ ನೀಡಿ ಗೌರವಿಸಿತ್ತು. ಮಲ್ಪೆ ರಾಮದಾಸ ಸಾಮಗ, ಅಳಕೆ ರಾಮಯ್ಯ ರೈ, ಕೋಳ್ಯೂರು ರಾಮಚಂದ್ರ ರಾವ್ ಅವರಂತಹ ಮೇರು ಕಲಾವಿದರ ಒಡನಾಟದಲ್ಲಿ ತಮ್ಮ ಕಲಾ ಅನುಭವವನ್ನು ಶ್ರೀಮಂತಗೊಳಿಸಿಕೊಂಡ ಅಮ್ಮಣ್ಣಾಯರು, ಇತ್ತೀಚೆಗೆ ಎಡನೀರು ಮೇಳದಲ್ಲಿ ತಿರುಗಾಟ ಪೂರ್ಣಗೊಳಿಸಿ ವಿಶ್ರಾಂತ ಜೀವನ ನಡೆಸುತ್ತಿದ್ದರು. ಹವ್ಯಾಸಿ ಭಾಗವತರಾಗಿ ತಮ್ಮ ಕಲಾ ಸೇವೆ ಮುಂದುವರಿಸಿದ್ದರು.

https://youtu.be/DQ8W3VN_f-w?si=LpGcbIJ-sWwqBVeO

ಇನ್ಮುಂದೆ ಸರ್ಕಾರಿ ಸ್ಥಳಗಳಲ್ಲಿ RSS ಕಾರ್ಯಕ್ರಮ ನಡೆಸಿದ್ರೆ 1 ಲಕ್ಷ ದಂಡ, 3 ವರ್ಷ ಜೈಲು ಶಿಕ್ಷೆ – ಸರ್ಕಾರದಿಂದ ಹೊಸ ಮಸೂದೆ ಮಂಡನೆ.!

ಭದ್ರಾ ನಾಲೆಗೆ ಹಾರಿ ಜೀವ ಕಳೆದುಕೊಂಡ ದಂಪತಿ

ಬೈಕ್ ಸವಾರನಿಗೆ ಕಪಾಳಮೋಕ್ಷ ಮಾಡಿದ ಟ್ರಾಫಿಕ್ ಪೊಲೀಸ್ -ವೈರಲ್ ವಿಡಿಯೋ ನೋಡಿ

TAGGED:Rasaraga Chakravarthy Dinesh Ammannaya is no moreVeteran Yakshagana Bhagavata
Share This Article
Facebook Twitter Copy Link Print
Previous Article Home Loan EMI: ಗೃಹಸಾಲದ ಇಎಂಐ ಕಟ್ಲಿಲ್ಲ ಅಂದ್ರೆ ಬ್ಯಾಂಕ್‌ನವರು ಮನೆಗೆ ಬೀಗ ಹಾಕಿಬಿಡುತ್ತಾರಾ?
Next Article ನೀರಿನ ಸಂಪ್‌ನಲ್ಲಿ ನವವಿವಾಹಿತೆ ಶವ ಪತ್ತೆ, ಪತಿ ಸೇರಿ ನಾಲ್ವರ ಸೆರೆ

Popular Posts

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

You Might Also Like

ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?