Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ಬೆಂಗಳೂರು : ಬೆಂಗಳೂರಿನ ಗುಂಡಿ ಬಿದ್ದ ರಸ್ತೆಗಳ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅಸಮಾಧಾನ ಹೊರಹಾಕಿದ್ದ ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಂದಾರ್ ಶಾ ( ಇದೀಗ ಸ್ವಂತ ಖರ್ಚಲ್ಲಿ ಬೆಂಗಳೂರು ರಸ್ತೆಗಳ ದುರಸ್ತಿ ಕಾರ್ಯಕ್ಕೆ ಮುಂದಾಗಿದ್ದಾರೆ. ಸಿಲಿಕಾನ್ ಸಿಟಿಯ 10ಕ್ಕೂ ಹೆಚ್ಚು ರಸ್ತೆಗಳ ಅಭಿವೃದ್ಧಿಗೆ ಕಿರಣ್ ಮಜುಂದಾರ್ ಶಾ ಹಣ ವ್ಯಯಿಸಲಿದ್ದಾರೆ ಎಂದು ತಿಳಿದು ಬಂದಿದೆ.
ರಸ್ತೆ ಹಾಗೂ ಮೂಲಭೂತ ಸೌಕರ್ಯದ ಬಗ್ಗೆ ಬೇಸತ್ತ ಉದ್ಯಮಿಯಿಂದ ಜಾಣ ನಡೆ ಅನುಸರಿಸುವ ಮೂಲಕ ಸರ್ಕಾರಕ್ಕೆ ಟಾಂಗ್ ಕೊಟ್ಟಿದ್ದಾರೆ. ಸರ್ಕಾರ ಮಾಡದಿದ್ರೆ ಏನಂತೆ ನಾನೇ ದುರಸ್ಥಿ ಮಾಡ್ತೀನಿ ರಸ್ತೆ ಕೊಡಿ ಎಂದು ಉದ್ಯಮಿ ಕಿರಣ್ ಮಜುಂದಾರ್ ಷಾ ಮನವಿ ಮಾಡಿದ್ದಾರೆ.
ಬೆಂಗಳೂರಿನ 10ಕ್ಕೂ ಹೆಚ್ಚು ರಸ್ತೆಗಳ ಅಭಿವೃದ್ಧಿ ಮಾಡಲು ಉದ್ಯಮಿ ಕಿರಣ್ ಮಜುಂದಾರ್ ಶಾ ಮುಂದೆ ಬಂದಿದ್ದಾರೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲ್ಲೂಕು ವ್ಯಾಪ್ತಿಯ ಹೆಬ್ಬಗೋಡಿ ಭಾಗದ 10ಕ್ಕೂ ಅಧಿಕ ರಸ್ತೆಗಳನ್ನ ಉದ್ಯಮಿ ಕಿರಣ್ ಮಜುಂದಾರ್ ಅಭಿವೃದ್ಧಿಗೆ ಕೇಳಿದ್ದಾರೆ.