newsics.com
ಮೈಸೂರು: ಸೆರೆ ಕಾರ್ಯಾಚರಣೆ ವೇಳೆ ರೈತನ ಮೇಲೆ ದಾಳಿ ಮಾಡಿದ್ದ ಹುಲಿಯನ್ನು ಅರಣ್ಯ ಇಲಾಖೆಯವರು ಸೆರೆ ಹಿಡಿದಿದ್ದಾರೆ.
ಸರಗೂರು ತಾಲ್ಲೂಕಿನ ಬಡಗಲಪುರ ಗ್ರಾಮದಲ್ಲಿ ಸೆರೆ ಕಾರ್ಯಾಚರಣೆಯ ವೇಳೆ ಹತ್ತಿ ಬಿಡಿಸುತ್ತಿದ್ದ ರೈತ ಮಹದೇವಗೌಡ ಮೇಲೆ ದಾಳಿ ನಡೆಸಿದ ಹುಲಿ ಕಣ್ಣಿನ ಗುಡ್ಡೆಯನ್ನು ಕಿತ್ತು ಹಾಕಿತ್ತು. ಗಾಯಗೊಂಡಿರುವ ಮಹದೇವಗೌಡರನ್ನು ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಹುಲಿಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಬಂಡೀಪುರ ಅರಣ್ಯ ವ್ಯಾಪ್ತಿಯ ಯಡಿಯಾಲ ವಲಯದಲ್ಲಿ ಸಾಕಾನೆಗಳ ಸಹಾಯದಿಂದ ಕಾರ್ಯಚರಣೆ ನಡೆಸುತ್ತಿದ್ದ ವೇಳೆ ಕಂಡು ಬಂದು ಹುಲಿಗೆ ಅರವಳಿಕೆ ಮದ್ದು ನೀಡಿ ಸೆರೆಹಿಡಿಯಲಾಯಿತು. ಹುಲಿ ಸೆರೆಯಾಗುತ್ತಿದ್ದಂತೆಯೇ ಗ್ರಾಮಸ್ಥರು ನಿಟ್ಟುಸಿರುಬಿಟ್ಟಿದ್ದಾರೆ. ಸೆರೆ ಸಿಕ್ಕ ಹುಲಿಯನ್ನು ಅಲ್ಲಿಂದ ಸ್ಥಳಾಂತರಿಸಲಾಯಿತು. ಹುಲಿಯನ್ನು ನೋಡಲು ಜನರು ಮುಗಿಬಿದ್ದರು.
ಈ ಸೌತೆಕಾಯಿ ನೋಡಿದ್ದೀರಾ.? ಸಿಕ್ಕರೆ ರಾತ್ರೋ ರಾತ್ರಿ ಕೋಟ್ಯಾಧಿಪತಿ ಆಗ್ತೀರಾ.!
Bamboo plastic ಚೀನಾ ಸಂಶೋಧಕರಿಂದ ಹೊಸ ಮಾದರಿ ಪ್ಲಾಸ್ಟಿಕ್ ಆವಿಷ್ಕಾರ, ಇದು 50 ದಿನದಲ್ಲಿ ಮಣ್ಣಲ್ಲಿ ಕರಗತ್ತೆ!