Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರಿನ ಮಾಗಡಿ ಮುಖ್ಯ ರಸ್ತೆಯಲ್ಲಿರುವ ಜಿ.ಟಿ.ಮಾಲ್ ನಲ್ಲಿ ವ್ಯಕ್ತಿಯೊಬ್ಬರು ಮೂರನೇ ಪ್ಲೋರ್ ನಿಂದ ನೆಲಮಹಡಿಗೆ ಬಿದ್ದು ಸಾವನ್ನಪ್ಪಿದ್ದಾರೆ. ಇದು ಆತ್ಮಹತ್ಯೆಯೋ ಅಥವಾ ಆಯ ತಪ್ಪಿ ಬಿದ್ದಿದ್ದಾರಾ ಅನ್ನೋದು ದೃಢಪಟ್ಟಿಲ್ಲ.
ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದಲೇ ಮೇಲಿನಿಂದ ಕೆಳಕ್ಕೆ ಬಿದ್ದಿರಬಹುದು ಅಂತ ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಕೆ.ಪಿ.ಅಗ್ರಹಾರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಜೇಬಿನಲ್ಲಿ 300 ರೂಪಾಯಿ ಹಣ ಪತ್ತೆಯಾಗಿದೆ. ಮೂರನೇ ಮಹಡಿಯಿಂದ ಕೆಳಗೆ ಬಿದ್ದ ತೀವ್ರತೆಗೆ ವ್ಯಕ್ತಿ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾರೆ. ಮುಖ, ತಲೆ ಭಾಗಕ್ಕೆ ಏಟು ಬಿದ್ದು ತೀವ್ರ ರಕ್ತ ಹರಿದಿದೆ.