Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಆಂಧ್ರಪ್ರದೇಶ : ಕರ್ನೂಲ್ ಖಾಸಗಿ ಬಸ್ ಅಗ್ನಿ ದುರಂತದಲ್ಲಿ ಬೆಂಗಳೂರಿನ ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ ಮಾಹಿತಿ ಲಭ್ಯವಾಗಿದೆ.
ಇಬ್ಬರು ಮಕ್ಕಳು ಹಾಗೂ ದಂಪತಿ ಸೇರಿ ನಾಲ್ವರು ಬೆಂಕಿಗೆ ಸಿಲುಕಿ ಸುಟ್ಟು ಕರಕಲಾಗಿದ್ದಾರೆ. ನೆಲ್ಲೂರು ಮೂಲದ ಗೊಳ್ಳ ರಮೇಶ್ ಕುಟುಂಬ ಬೆಂಗಳೂರಿನಲ್ಲಿ ನೆಲೆಸಿತ್ತು. ಈ ಕುಟುಂಬದ ನಾಲ್ವರು ಬೆಂಕಿಗೆ ಸಿಲುಕಿ ಸಜೀವವಾಗಿ ದಹನಗೊಂಡಿದ್ದಾರೆ.
ಆಂಧ್ರಪ್ರದೇಶದಲ್ಲಿ ನಡೆದ ಖಾಸಗಿ ಬಸ್ ಅಗ್ನಿ ದುರಂತ ಕೇಸ್ ಗೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ.ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ಪರಿಹಾರವನ್ನು ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಘೋಷಣೆ ಮಾಡಲಾಗಿದೆ.