Subscribe ನ್ಯೂಸಿಕ್ಸ್ ಕನ್ನಡ
NewsicsKannada/ YouTube
newsics.com
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ಧರ್ಮಸ್ಥಳದಲ್ಲಿ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೌಜನ್ಯ ಪರ ಹೋರಾಟಗಾರರಾದ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಜಯಂತ್, ವಿಠಲಗೌಡ ಅವರಿಗೆ ಎಸ್ಐಟಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.
ಇಂದು ಬೆಳಗ್ಗೆ 10:30ಕ್ಕೆ ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿಯಿಂದ ನೋಟಿಸ್ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ಎಸ್ಐಟಿ ಕಚೇರಿಯಲ್ಲಿ ವಿಚಾರಣೆ ನಡೆಯಲಿದೆ. ವಿಚಾರಣೆ ಹಿನ್ನೆಲೆಯಲ್ಲಿ ಮೂರು ದಿನ ಎಸ್ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಬೆಳ್ತಂಗಡಿಯಲ್ಲೇ ಉಳಿದಿದ್ದಾರೆ. ಅವರ ಸಮ್ಮುಖದಲ್ಲಿಯೇ ನಾಲ್ವರ ವಿಚಾರಣೆ ನಡೆಸಲಾಗುವುದು.