Subscribe ನ್ಯೂಸಿಕ್ಸ್ ಕನ್ನಡ
NewsicsKannada/ YouTube
newsics.com
ಕರ್ನಾಟಕದ ನೆರೆಯ ರಾಜ್ಯದಲ್ಲಿ ವರುಣಾರ್ಭಟ ಮುಂದುವರೆದಿದ್ದು, ಭಾರಿ ಗಾಳಿಯೊಂದಿಗೆ ಮೊಂಟಾ ಚಂಡಮಾರುತ ಅಪ್ಪಳಿಸುತ್ತಿದೆ.
ರಾಜ್ಯದಲ್ಲಿಂದು ವರುಣನ ಆರ್ಭಟ ಹೆಚ್ಚಿರಲಿದ್ದು, ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.ಉತ್ತರ ಒಳನಾಡು, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದೆ. ಚಂಡಮಾರುತವಾಗಿ ಬದಲಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದಕ್ಕೆ ಮೊಂಟಾ ಸೈಕ್ಲೋನ್ ಅಂತಾ ನಾಮಕರಣ ಮಾಡಿದ್ದು, ಭಾರೀ ಗಾಳಿಯೊಂದಿಗೆ ಮೊಂಟಾ ಚಂಡಮಾರುತ ಆರ್ಭಟಿಸಲಿದೆ.
ಒಡಿಶಾ, ತಮಿಳುನಾಡು, ಕೇರಳ ಹಾಗೂ ಕರ್ನಾಟಕದಲ್ಲಿ ಭಾರೀ ಮಳೆ ಆಗಲಿದೆ ಎಂದು ಮುನ್ಸೂಚನೆ ನೀಡಿದೆ. ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲೂ ಮಳೆ ಆಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ NDRF, SDRF, ರಕ್ಷಣಾ ಸಿಬ್ಬಂದಿ ನಿಯೋಜಿಸಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ.