Subscribe ನ್ಯೂಸಿಕ್ಸ್ ಕನ್ನಡ
NewsicsKannada/ YouTube
newsics.com
ಕರ್ನೂಲ್ ಬಳಿ ಬಸ್ ದುರಂತ ಮಾಸುವ ಮುನ್ನವೇ ಮತ್ತೊಂದು ಘಟನೆ ಸಂಭವಿಸಿದೆ. ರಾಜಸ್ಥಾನದ ಜೈಪುರದಲ್ಲಿ ಈ ಭಯಾನಕ ಬಸ್ ಅಪಘಾತ ಸಂಭವಿಸಿದ್ದು, ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಕನಿಷ್ಠ 12 ಮಂದಿಗೆ ಸುಟ್ಟ ಗಾಯಗಳಾಗಿ ಆಸ್ಪತ್ರೆ ಸೇರಿದ್ದಾರೆ.
ಈ ಬಸ್ ದುರಂತದ ಘಟನೆ ಮನೋಹರ್‌ಪುರ ಪ್ರದೇಶದ ಟೋಡಿ ಗ್ರಾಮದಲ್ಲಿ ನಡೆದಿದೆ. ಇಟ್ಟಿಗೆ ಗೂಡಲ್ಲಿ ಕೆಲಸ ಮಾಡುವ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಬಸ್ ಹೈಟೆನ್ಷನ್ ವಿದ್ಯುತ್ ತಂತಿಗೆ ತಗುಲಿ ಬೆಂಕಿ ಹೊತ್ತಿಕೊಂಡಿದೆ.
ಬಸ್ ಇಟ್ಟಿಗೆ ಗೂಡು ಸ್ಥಳದ ಬಳಿ ಸಂಚಾರದಲ್ಲಿ ತೊಡಗಿದ್ದಾಗ ಅಪಘಾತ ಸಂಭವಿಸಿದೆ. ವಾಹನ ಹೈಟೆನ್ಷನ್ ತಂತಿಗೆ ಡಿಕ್ಕಿ ಹೊಡೆದು ತಕ್ಷಣಕ್ಕೆ ಬೆಂಕಿ ಹೊತ್ತಿಕೊಂಡಿದೆ. ಕ್ಷಣಮಾತ್ರದಲ್ಲಿ ಬಸ್ ಸಂಪೂರ್ಣ ಬೆಂಕಿಯಲ್ಲಿ ಮುಳುಗಿ, ಹಲವಾರು ಕಾರ್ಮಿಕರು ಒಳಗೆ ಸಿಲುಕಿಕೊಂಡಿದ್ದಾರೆ. ಸ್ಥಳೀಯರು ಮತ್ತು ಪೊಲೀಸರು ತಕ್ಷಣ ರಕ್ಷಣಾ ಕಾರ್ಯ ನಡೆಸಿದ್ದರೆ, ಆದರೂ ಇಬ್ಬರು ಸಾವನಪ್ಪಿದ್ದಾರೆ.