Subscribe ನ್ಯೂಸಿಕ್ಸ್ ಕನ್ನಡ
NewsicsKannada/ YouTube
newsics.com
ಬೆಂಗಳೂರು : ಆರ್ ಎಸ್ ಎಸ್ ಪಥಸಂಚಲನಕ್ಕೆ ನಿರ್ಬಂಧಕ್ಕೆ ಮುಂದಾಗಿದ್ದ ರಾಜ್ಯ ಸರ್ಕಾರಕ್ಕೆ ಹಿನ್ನೆಡೆಯಾಗಿದ್ದು, ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠ ಆದೇಶ ಹೊರಡಿಸಿದೆ. ಹೌದು ಸಚಿವ ಪ್ರಿಯಾಂಕ ಖರ್ಗೆ ರಾಜ್ಯದಲ್ಲಿ ಆರ್‌ಎಸ್ ಚಟುವಟಿಕೆಗಳಿಗೆ ನಿರ್ಬಂಧ ಸೇರುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಆರ್ಎಸ್ಎಸ್ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಆದೇಶ ಹೊರಡಿಸಿತ್ತು. ಇದೀಗ ಈ ಒಂದು ವಿಚಾರಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದ್ದು ರಾಜ್ಯ ಸರ್ಕಾರಕ್ಕೆ ತೀವ್ರ ಹಿನ್ನೆಡೆಯಾಗಿದೆ.
ಧಾರವಾಡದ ಹೈಕೋರ್ಟ್ ಪೀಠದಲ್ಲಿ ಪುನಃಶ್ಚೇತನ ಸೇವಾ ಸಂಸ್ಥೆ ಹುಬ್ಬಳ್ಳಿಯ ಎನ್‌ಜಿಓ ರಿಟ್ ಅರ್ಜಿ ಸಲ್ಲಿಸಿತ್ತು. ಅರ್ಜಿಯಲ್ಲಿ ಆದೇಶ ಕಾನೂನು ಬಾಹಿರ ಮತ್ತು ಸಂವಿಧಾನ ಬಾಹಿರವಾಗಿದೆ. ಆದೇಶದಲ್ಲಿ 10 ಜನಕ್ಕಿಂತ ಹೆಚ್ಚು ಸೇರುವಂತಿಲ್ಲ ಎಂದು ನಿರ್ಬಂಧ ವಿಧಿಸಿತ್ತು. ಈ ನಿರ್ಬಂಧ ವಿಧಿಸಲು ಕಾನೂನಿನಲ್ಲಿ ಅವಕಾಶ ಇಲ್ಲ. ಇದು ಸಂವಿಧಾನದ ಆರ್ಟಿಕಲ್ 91 ಎ ಪ್ರಕಾರ ಜನಗಳು ಸಭೆ ಸಮಾರಂಭಗಳಲ್ಲಿ ಜನ ಸೇರುವ ಹಕ್ಕಿದೆ ಆ ಹಕ್ಕನ್ನು ಉಲ್ಲಂಘನೆ ಮಾಡಲಾಗುತ್ತದೆ.