Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Second phase of SIR 12 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಲ್ಲಿ ಇಂದಿನಿಂದ ಎರಡನೇ ಹಂತದ ಎಸ್ಐಆರ್
ದೇಶಪ್ರಮುಖ

Second phase of SIR 12 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಲ್ಲಿ ಇಂದಿನಿಂದ ಎರಡನೇ ಹಂತದ ಎಸ್ಐಆರ್

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಿಹಾರದಲ್ಲಿ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ ಯಶಸ್ವಿಯಾಗಿ ಪೂರ್ಣಗೊಳಿಸಿರುವ ಚುನಾವಣಾ ಆಯೋಗವು ಇದೀಗ ಎರಡನೇ ಹಂತದ ಗಣತಿಪೂರ್ವ ಪ್ರಕ್ರಿಯೆಯನ್ನು ಸೋಮವಾರ ಮಧ್ಯರಾತ್ರಿ ಅಂದರೆ ಮಂಗಳವಾರದಿಂದ (ಅ. 28) ಆರಂಭಿಸಿದೆ.

12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಆರಂಭಿಸುವುದಾಗಿ ಆಯೋಗವು ಸೋಮವಾರ ಪ್ರಕಟಿಸಿದೆ. ನವೆಂಬರ್ 4ರಿಂದ ಗಣತಿ ಪ್ರಕ್ರಿಯೆ ಆರಂಭವಾಗಲಿದೆ.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್, ಎರಡನೇ ಹಂತದಲ್ಲಿ ಗೋವಾ, ಛತ್ತೀಸ್‌ಗಢ, ಗುಜರಾತ್, ಕೇರಳ, ಮಧ್ಯಪ್ರದೇಶ, ಉತ್ತರ ಪ್ರದೇಶ, ರಾಜಸ್ಥಾನ, ಪಶ್ಚಿಮ ಬಂಗಾಳ, ತಮಿಳುನಾಡು, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಪುದುಚೇರಿ ಮತ್ತು ಲಕ್ಷದ್ವೀಪಗಳಲ್ಲಿ ಈ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿಸಿದರು.

ಈ ವಿಶೇಷ ಪರಿಷ್ಕರಣೆ ಪ್ರಕ್ರಿಯೆಯು ಅತ್ಯಂತ ವ್ಯವಸ್ಥಿತವಾಗಿ ನಡೆಯಲಿದ್ದು, ಹಲವು ಹಂತಗಳನ್ನು ಒಳಗೊಂಡಿದೆ ಪರಿಷ್ಕರಣೆ ನಡೆಯುವ 12 ರಾಜ್ಯಗಳಲ್ಲಿ ಸೋಮವಾರ (ಅ.27) ಮಧ್ಯರಾತ್ರಿ 12 ಗಂಟೆಗೆ ಅಸ್ತಿತ್ವದಲ್ಲಿರುವ ಮತದಾರರ ಪಟ್ಟಿಯನ್ನು ಸ್ಥಗಿತಗೊಳಿಸಲಾಗುತ್ತದೆ. ಪ್ರತಿ ಮತಗಟ್ಟೆಯ ವ್ಯಾಪ್ತಿಯಲ್ಲಿ, ಬೂತ್ ಮಟ್ಟದ ಅಧಿಕಾರಿಗಳು (BLO) ಪ್ರತಿ ಮನೆಗೂ ಕನಿಷ್ಠ ಮೂರು ಬಾರಿ ಭೇಟಿ ನೀಡಿ, ಮತದಾರರಿಗೆ ‘ವಿಶಿಷ್ಟ ಗಣತಿ ನಮೂನೆ’ಗಳನ್ನು (Unique Enumeration Forms) ವಿತರಿಸಲಿದ್ದಾರೆ. ವಲಸೆ ಹೋದ ಅಥವಾ ಮನೆಯಲ್ಲಿ ಲಭ್ಯವಿಲ್ಲದ ಮತದಾರರು ತಮ್ಮ ಗಣತಿ ನಮೂನೆಗಳನ್ನು ಆನ್‌ಲೈನ್ ಮೂಲಕವೂ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

2003ರ ಮತದಾರರ ಪಟ್ಟಿಯಲ್ಲಿ ತಮ್ಮ ಅಥವಾ ತಮ್ಮ ಪೋಷಕರ ಹೆಸರು ಇರುವವರಿಗೆ ಯಾವುದೇ ಹೆಚ್ಚುವರಿ ದಾಖಲೆಗಳನ್ನು ಸಲ್ಲಿಸುವ ಅಗತ್ಯವಿರುವುದಿಲ್ಲ. ಇದಕ್ಕಾಗಿ 2002-2004ರ ಅವಧಿಯ ಮತದಾರರ ಪಟ್ಟಿಗಳನ್ನು ಸಾರ್ವಜನಿಕವಾಗಿ ಆಯೋಗದ ವೆಬ್‌ಸೈಟ್‌ನಲ್ಲಿ ಲಭ್ಯವಾಗುವಂತೆ ಮಾಡಲಾಗುತ್ತದೆ.

ಪರಿಷ್ಕರಣೆ ಏಕೆ ಅಗತ್ಯ?

ವಲಸೆ, ಮರಣ ಹೊಂದಿದವರ ಹೆಸರುಗಳನ್ನು ತೆಗೆದುಹಾಕದಿರುವುದು, ಮತ್ತು ವಿದೇಶಿಯರ ಹೆಸರುಗಳು ತಪ್ಪಾಗಿ ಸೇರ್ಪಡೆಯಾಗುವಂತಹ ಸಮಸ್ಯೆಗಳಿಂದ ಮತದಾರರ ಪಟ್ಟಿಯ ನಿಖರತೆ ಕಡಿಮೆಯಾಗುತ್ತದೆ. ಇಂತಹ ದೋಷಗಳನ್ನು ಸರಿಪಡಿಸಲು ಈ ವಿಶೇಷ ತೀವ್ರ ಪರಿಷ್ಕರಣೆ ಅಗತ್ಯವಾಗಿದೆ ಮುಖ್ಯ ಚುನಾವಣಾಧಿಕಾರಿ ಜ್ಞಾನೇಶ್ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದ್ದಾರೆ.

ರಾಜಕೀಯ ಪಕ್ಷಗಳು ಕೂಡ ಹಲವು ಬಾರಿ ಮತದಾರರ ಪಟ್ಟಿಯ ಗುಣಮಟ್ಟದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದವು. ಸ್ವಾತಂತ್ರ್ಯಾನಂತರ ಇದು 9ನೇ ವಿಶೇಷ ತೀವ್ರ ಪರಿಷ್ಕರಣೆಯಾಗಿದ್ದು, ಕೊನೆಯ ಬಾರಿಗೆ 21 ವರ್ಷಗಳ ಹಿಂದೆ (2002-2004) ಈ ಪ್ರಕ್ರಿಯೆ ನಡೆದಿತ್ತು.

ಬಿಹಾರದಲ್ಲಿ ಸುಮಾರು 7.5 ಕೋಟಿ ಮತದಾರರನ್ನು ಒಳಗೊಂಡ ಮೊದಲ ಹಂತದ ಪ್ರಕ್ರಿಯೆಯು ಯಾವುದೇ ಆಕ್ಷೇಪಣೆಗಳಿಲ್ಲದೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಇದು ಇತರ ರಾಜ್ಯಗಳಿಗೆ ಮಾದರಿಯಾಗಿದೆ ಎಂದು ಆಯುಕ್ತರು ಶ್ಲಾಘಿಸಿದ್ದಾರೆ.

strange changes ಆಫೀಸ್‌ನಲ್ಲಿ ಟೆಕ್ಕಿಗಳು, ಹೊರಬಂದ್ರೆ ಕ್ಯಾಬ್ ಡ್ರೈವರ್‌ಗಳು! ಇದೇನಿದು ವಿಚಿತ್ರ? ಈ ಸ್ಟೋರಿ ಓದಿ

ಮುಟ್ಟಿನ ಸಮಯದಲ್ಲಿ ಪ್ಯಾಡ್ ಬಳಸಿದ್ರೆ ಏನಾಗುತ್ತೆ? ಡಾಕ್ಟರ್ ಹೇಳಿದ್ದೇನು?

ಪ್ರೇಯಸಿಯೊಂದಿಗೆ ಲಾಡ್ಜ್ನಲ್ಲಿದ್ದಾಗ ಪತ್ನಿ ಕೈಗೆ ಸಿಕ್ಕಿಬಿದ್ದ ಪತಿ: ಮುಂದೇನಾಯ್ತು?

ಮೊಂತಾ ಚಂಡಮಾರುತದ ಎಫೆಕ್ಟ್; ರಾಜ್ಯಾದ್ಯಂತ ಯೆಲ್ಲೋ ಅಲರ್ಟ್

TAGGED:Second phase of SIR in 12 states and union territories from today
Share This Article
Facebook Twitter Copy Link Print
Previous Article Executive engineer arrested ಲಂಚ ಪಡೆದ ಎಕ್ಸಿಕ್ಯೂಟಿವ್ ಎಂಜಿನಿಯರ್ ಬಂಧನ
Next Article 8000 women cheated ವರ್ಕ್ ಫ್ರಂ ಹೋಂ ಆಮಿಷ: 8 ಸಾವಿರ ಮಹಿಳೆಯರಿಗೆ ವಂಚನೆ, 12 ಕೋಟಿ ಲೂಟಿ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?