Subscribe ನ್ಯೂಸಿಕ್ಸ್ ಕನ್ನಡ
NewsicsKannada/ YouTube
newsics.com
ಬೆಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದ ಕೇಸ್ ರದ್ದುಪಡಿಸುವಂತೆ ಬುರುಡೆ ಗ್ಯಾಂಗ್ ನಿಂದ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.
ತಾವೇ ಹೋರಾಟ ಮಾಡಿ ಹಾಕಿಸಿದ್ದ ಕೇಸ್ ರದ್ದುಪಡಿಸುವಂತೆ ಹೈಕೋರ್ಟ್ ಮೊರೆ ಹೋಗಿದ್ದು, ಧರ್ಮಸ್ಥಳಕ್ಕೆ ಮಸಿ ಬಳಿದ ಕೇಸ್‌ನಲ್ಲಿ ಬಂಧನದಿಂದ ಪಾರಾಗಲು ಬುರುಡೆ ಗ್ಯಾಂಗ್ ಯತ್ನ ನಡೆಸಿದೆ. ಮಾಸ್ಕ್ ಮ್ಯಾನ್ ಚಿನ್ನಯ್ಯ ಇದೊಂದು ಷಡ್ಯಂತ್ರ ಎಂದು ಹೇಳಿದ್ದರಿಂದ ಬುರುಡೆ ಗ್ಯಾಂಗ್ ಸಂಕಷ್ಟಕ್ಕೆ ಸಿಲುಕಿದೆ.
ಅಂತರರಾಷ್ಟ್ರೀಯ ಮಟ್ಟದಲ್ಲಿ ಧರ್ಮಸ್ಥಳ ವಿರುದ್ಧ ನಡೆದ ಅಪಪ್ರಚಾರ ಪ್ರಕರಣ ಇದಾಗಿದ್ದು, ಮಹೇಶ್ ಶೆಟ್ಟಿ ತಿಮರೋಡಿ, ಜಯಂತ್, ಗಿರೀಶ್ ಮಟ್ಟಣ್ಣನವರ್ ವಿಠ್ಠಲ್ ಗೌಡ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಇಂದು ಹೈಕೋರ್ಟ್ ನಲ್ಲಿ ಅರ್ಜಿಯ ವಿಚಾರಣೆ ನಡೆಯಲಿದೆ.
ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ನೇತೃತ್ವದ ಏಕಸದಸ್ಯ ಪೀಠದ ಮುಂದೆ ಗುರುವಾರ ಅರ್ಜಿ ವಿಚಾರಣೆ ನಡೆಯಲಿದೆ. ಧರ್ಮಸ್ಥಳಕ್ಕೆ ಮಸಿ ಬಳಿಯುವ ಪ್ರಯತ್ನವಾಗಿ ತಾವೇ ಹೋರಾಟ ಮಾಡಿ ಹಾಕಿದ್ದ ಪ್ರಕರಣವನ್ನು ರದ್ದುಪಡಿಸುವಂತೆ ಬುರುಡೆ ಗ್ಯಾಂಗ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿರುವುದು ಅಚ್ಚರಿ ಮೂಡಿಸಿದೆ.