Subscribe ನ್ಯೂಸಿಕ್ಸ್ ಕನ್ನಡ
NewsicsKannada/ YouTube
newsics.com
ಬೆಂಗಳೂರು: ಸ್ಯಾಂಡಲ್ವುಡ್ನ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ವಿರುದ್ಧ ನಗರ ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ನಟ ಧ್ರುವ ಸರ್ಜಾ ಅವರಿಂದ ಅಕ್ಕಪಕ್ಕದ ನಿವಾಸಿಗಳಿಗೆ ತೊಂದರೆಯಾಗುತ್ತಿದೆ. ಪ್ರತಿದಿನ ನಮ್ಮ ಮನೆಯ ಮುಂದೆ ಧ್ರುವ ಸರ್ಜಾ ಅಭಿಮಾನಿಗಳು ಬೈಕ್ , ಕಾರುಗಳನ್ನು ತಂದು ಪಾರ್ಕ್ ಮಾಡುತ್ತಿದ್ದಾರೆ. ಗುಂಪುಗೂಡುವುದು, ಮನೆಯ ಗೋಡೆಗಳಿಗೆ ಉಗುಳುವುದು ಮಾಡುತ್ತಿದ್ದಾರೆ. ಇದರಿಂದಾಗಿ ಧ್ರುವಸರ್ಜಾ ಅಕ್ಕ-ಪಕ್ಕದ ಮನೆಯವರಿಗೆ ತೊಂದರೆಯಾಗುತ್ತಿದೆ. ಕಿರಿಕಿರಿಯುಂಟಾಗುತ್ತಿದೆ ಎಂದು ದೂರು ನೀಡಲಾಗಿದೆ.
ಮನೋಜ್ ಎಂಬುವವರು ಬನಶಂಕರಿ ಠಾಣೆಯಲ್ಲಿ ದೂರು ನೀಡಿದ್ದು, ನಟ ಧ್ರುವ ಸರ್ಜಾ, ಅವರ ಮ್ಯಾನೇಜರ್, ಕಾರು ಚಾಲಕ ಹಾಗೂ ಫ್ಯಾನ್ಸ್ ವಿರುದ್ಧ ಎನ್ ಸಿಆರ್ ದಾಖಲಾಗಿದೆ.
https://www.newsics.com/2025/10/30/tickling-children-to-make-them-laugh-is-dangerous/