Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಚಿಕ್ಕಮಗಳೂರು: ಆನೆ ದಾಳಿಗೆ ಇಬ್ಬರು ಬಲಿಯಾಗಿರುವ ಘಟನೆ ಶೃಂಗೇರಿ ತಾಲೂಕಿನಲ್ಲಿ ಕೆರೆಕಟ್ಟೆ ಸಮೀಪದ ಕೆರೆಮನೆ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಹರೀಶ್ ಹಾಗೂ ಉಮೇಶ್ ಆನೆ ದಾಳಿಗೆ ಪ್ರಾಣ ಕಳೆದುಕೊಂಡವರು. ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ತೆರಳುತ್ತಿದ್ದ ತಹಸೀಲ್ದಾರ್ ಅವರಿದ್ದ ಜೀಪನ್ನು ತಡೆದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.
ಕೊಟ್ಟಿಗೆಗೆ ಸೊಪ್ಪು ತರಲು ಹೋಗಿದ್ದ ಸಂದರ್ಭದಲ್ಲಿ ಮೊದಲು ವ್ಯಕ್ತಿಯೊಬ್ಬನ ಮೇಲೆ ಆನೆ ದಾಳಿ ಮಾಡಿದೆ. ಮನೆಯಿಂದ ಸ್ವಲ್ಪ ದೂರದಲ್ಲಿ ನಾಯಿ ಏಕೆ ಬೊಗಳುತ್ತಿದೆ ಎಂದು ನೋಡಲು ಹೋಗಿದ್ದ ಮತ್ತೊಬ್ಬ ವ್ಯಕ್ತಿಯ ಮೇಲೂ ಆನೆ ದಾಳಿ ಮಾಡಿ ಕೊಂದು ಹಾಕಿದೆ.
ಘಟನಾ ಸ್ಥಳಕ್ಕೆ ಶೃಂಗೇರಿ ಪೊಲೀಸರು ಹಾಗೂ ಅರಣ್ಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಇದು ಕಾರ್ಕಳ ಅರಣ್ಯ ವ್ಯಾಪ್ತಿಗೆ ಸೇರುವ ಪ್ರದೇಶವಾಗಿದೆ.
ಒಂದೆಡೆ ಘಟನಾ ಸ್ಥಳಕ್ಕೆ ತೆರಳುತ್ತಿದ್ದ ತಹಶೀಲ್ದಾರ್ ಜೀಪನ್ನು ಅಡ್ಡಗಟ್ಟಿ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರೆ, ಮತ್ತೊಂದೆಡೆ ಸ್ಥಳಕ್ಕೆ ಭೇಟಿ ನೀಡಿದ, ಜಿಲ್ಲಾಧಿಕಾರಿ ಮೀನಾ ನಾಗರಾಜ್ ಮತ್ತು ಎಸ್ಪಿ ವಿಕ್ರಂ ಅಮಟೆ ಅವರನ್ನೂ ಸ್ಥಳೀಯರು ತರಾಟೆಗೆ ತೆಗೆದುಕೊಂಡರು.
ಪ್ರಮುಖ ರಸ್ತೆಯಲ್ಲಿ ನೂರಾರು ಜನ ಸೇರಿ ಪ್ರತಿಭಟನೆ ಮುಂದುವರಿಸಿದ್ದಾರೆ. ಪದೇ ಪದೇ ಈ ರೀತಿಯ ಘಟನೆಗಳು ಈ ಭಾಗದಲ್ಲಿ ನಡೆಯುತ್ತಿದ್ದರೂ ಅರಣ್ಯ ಇಲಾಖೆ ಕಣ್ಮುಚ್ಚಿ ಕುಳಿತಿದೆ. ಹಲವು ಬಾರಿ ಮನವಿ ಮಾಡಿದರೂ ಯಾವುದೇ ರೀತಿಯ ಪ್ರಯೋಜನವಾಗಿಲ್ಲ. ಕೂಡಲೇ ಅರಣ್ಯ ಸಚಿವರು ಸ್ಥಳಕ್ಕೆ ಭೇಟಿ ನೀಡಬೇಕು. ಅಲ್ಲಿಯವರೆಗೂ ನಾವು ಪ್ರತಿಭಟನೆ ಮುಂದುವರೆಸುತ್ತೇವೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.
ಮಹಿಳೆ ಗರ್ಭಿಣಿಯಾಗಿಸಿ ಹಣ ಗಳಿಸಲು ಮುಂದಾಗಿ 11 ಲಕ್ಷ ಕಳೆದುಕೊಂಡ ಗುತ್ತಿಗೆದಾರ