Subscribe ನ್ಯೂಸಿಕ್ಸ್ ಕನ್ನಡ
NewsicsKannada/ YouTube
newsics.com
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಹೊಂಬಾಳೆಗೌಡನ ದೊಡ್ಡಿ ಗ್ರಾಮದಲ್ಲಿ ನಡೆದ ವಿಚಿತ್ರ ಘಟನೆ ಸ್ಥಳೀಯರನ್ನು ಬೆಚ್ಚಿಬೀಳುವಂತೆ ಮಾಡಿತ್ತು. ಸತೀಶ್ ಎಂಬುವರ ಮನೆಯೊಳಗೆ ಆಕಸ್ಮಿಕವಾಗಿ ರಕ್ತದ ಕಲೆಗಳು ಕಾಣಿಸಿಕೊಂಡಿದ್ದು, ಈ ನಿಗೂಢ ಘಟನೆಗೆ ಕಾರಣ ತಿಳಿಯದೆ ದಂಪತಿ ಭಯಭೀತರಾಗಿದ್ದರು.
ದಂಪತಿ ಮನೆಯ ಹಾಲ್, ಬಾತ್‌ರೂಂ, ಟಿವಿ, ಫ್ಯಾನ್ ಎಲ್ಲೆಡೆ ರಕ್ತದ ಕಲೆಗಳು ಕಂಡುಬಂದಿದ್ದು, ಪೊಲೀಸರು ಮತ್ತು ಎಫ್‌ಎಸ್‌ಎಲ್ ಶ್ವಾನದಳ ಸ್ಥಳ ಪರಿಶೀಲನೆ ನಡೆಸಿದ್ದರು.ರಕ್ತದ ಮಾದರಿಯನ್ನು ಲ್ಯಾಬ್‌ಗೆ ಕಳುಹಿಸಲಾಗಿತ್ತು
ರಕ್ತದ ಸ್ಯಾಂಪಲ್ ಅನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಇದೀಗ ಲ್ಯಾಬ್ ರಿಪೋರ್ಟ್ ಬಂದಿದ್ದು, ಮನೆಯ ತುಂಬಾ ಚೆಲ್ಲಾಡಿದ್ದು ಮನುಷ್ಯನ ರಕ್ತವೆಂದು ದೃಢಪಟ್ಟಿದೆ.
ಪ್ರಾಥಮಿಕ ತನಿಖೆಯಲ್ಲಿ ಅದು ಮನುಷ್ಯನ ರಕ್ತವಾಗಿರುವುದು ದೃಢಪಟ್ಟಿದೆ. ಅಂತಿಮ ದೃಢೀಕರಣಕ್ಕಾಗಿ ಎಫ್‌ಎಸ್ಎಲ್ ವರದಿ ನಿರೀಕ್ಷಿಸಲಾಗುತ್ತಿದೆ. ಈ ವರದಿಯೀಗ ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ರಕ್ತ ಮನೆಯಲ್ಲಿ ಹೇಗೆ ಹರಿಯಿತು, ಅದು ಯಾರ ರಕ್ತ ಎಂಬೆಲ್ಲಾ ಪ್ರಶ್ನೆಗಳು ಪೊಲೀಸರಿಗೆ ಕಾಡಿದ್ದು, ತನಿಖೆ ಮುಂದುವರಿಸಿದ್ದಾರೆ. ಈ ಘಟನೆ ಗ್ರಾಮಸ್ಥರಲ್ಲಿ ಭಯ ಮತ್ತು ಕುತೂಹಲ ಮೂಡಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದ ನಿಜವಾದ ಸಂಗತಿ ಹೊರಬರುವುದು ಇನ್ನೂ ಕೆಲವು ದಿನಗಳು ಹಿಡಿಯುವ ನಿರೀಕ್ಷೆಯಿದೆ.
https://www.newsics.com/2025/11/01/transgender-womans-head-shaved-and-brutally-beaten/